ವಿಜಯ ಸಂಘರ್ಷ /ಬೆಂಗಳೂರು
ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧಿಸಿ ಅಧಿಕೃತ ಅಧಿಸೂಚನೆ ಹೊರಡಿಸಿರುವ ಸರಕಾರ, ಕನಿಷ್ಠ ಅಂಕ ನೀಡಿ ಎಲ್ಲರನ್ನು ಉತ್ತೀರ್ಣಗೊಳಿಸಲು ಸೂಚಿಸಿದ್ದು, ಮರು ಮೌಲ್ಯಮಾಪನ ಇರುವುದಿಲ್ಲ ಎಂದು ಖಚಿತಪಡಿಸಿದೆ.
ಪರೀಕ್ಷೆಯ ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ. 2020-21ನೇ ಸಾಲಿನ ಎಸೆಸೆಲ್ಸಿ ಮುಖ್ಯ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಕನಿಷ್ಠ ಉತ್ತೀರ್ಣತೆಯ ಅಂಕ ನೀಡಿ, ವಿದ್ಯಾರ್ಥಿಗಳು ಗಳಿಸುವ ಅಂಕದ ಆಧಾರದಲ್ಲಿ ಶ್ರೇಣಿ ನೀಡಲು ಸೂಚಿಸಲಾಗಿದೆ.
90ರಿಂದ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಎ+, 80ರಿಂದ 89 ಅಂಕ ಪಡೆಯುವ ವಿದ್ಯಾರ್ಥಿ ಗಳಿಗೆ ಎ, 60ರಿಂದ 79 ಅಂಕ ಪಡೆಯುವ ವಿದ್ಯಾರ್ಥಿ ಗಳಿಗೆ ಬಿ ಮತ್ತು 35ರಿಂದ 59 ಅಂಕ ಪಡೆ ಯುವ ವಿದ್ಯಾರ್ಥಿಗಳಿಗೆ ಸಿ ಶ್ರೇಣಿ ನೀಡಲು ತಿಳಿಸಿದೆ.
ಪ್ರತೀ ವಿಷಯದ ಪರೀ ಕ್ಷೆ 40 ಅಂಕಗಳಿಗೆ ನಡೆಯಲಿದ್ದು, ಅವುಗಳನ್ನು 80 ಅಂಕಗಳಿಗೆ ಪರಿವರ್ತಿಸಬೇಕು (ಪ್ರಥಮ ಭಾಷೆ 125 ಅಂಕ), ಒಟ್ಟು 625 ಅಂಕಕ್ಕೆ ಅನುಗುಣವಾಗಿ ಫಲಿತಾಂಶ ನೀಡಲು ಸೂಚಿಸಿದೆ.
ಇದು 2020-21ನೇ ಸಾಲಿಗೆ ಸೀಮಿತವಾಗಿ ಇರಲಿದೆ. ಜತೆಗೆ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ಸಂಬಂಧಿಸಿ ಛಾಯಾಪ್ರತಿ, ಅಂಕಗಳ ಮರು ಎಣಿಕೆ, ಮರು ಮೌಲ್ಯಮಾಪನ ಇರುವುದಿಲ್ಲ. ಕೊರೊನಾ ಕಾರಣಕ್ಕೆ ಅನಾರೋಗ್ಯದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪ್ರಥಮ ಅವಕಾಶ ಎಂದು ಮರು ಪರೀಕ್ಷೆಯಲ್ಲಿ ಅವಕಾಶ ನೀಡಲಾಗುತ್ತದೆ. ಎಲ್ಲವೂ ಬಹು ಆಯ್ಕೆಯ ಪ್ರಶ್ನೆಗಳು ಆಗಿರಲಿದ್ದು, 8.77 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ದುಪ್ಪಟ್ಟು ಪರೀಕ್ಷಾ ಕೇಂದ್ರಗಳು
ಈ ವರ್ಷ 6 ಸಾವಿರ ಪರೀಕ್ಷಾ ಕೇಂದ್ರಗಳು ಇರಲಿವೆ. ಒಂದು ಡೆಸ್ಕ್ ನಲ್ಲಿ ಒಬ್ಬ ವಿದ್ಯಾರ್ಥಿ, ಒಂದು ಕೊಠಡಿಗೆ 12 ವಿದ್ಯಾರ್ಥಿಗಳನ್ನು ಕುಳ್ಳಿರಿಸ ಲಾಗುತ್ತದೆ. ವಿದ್ಯಾರ್ಥಿಗಳ ನಡುವೆ 6 ಅಡಿ ಅಂತರವಿರುವಂತೆ ನೋಡಿಕೊಳ್ಳ ಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳ ಬೇಕು ಎಂದು ಸೂಚನೆ ನೀಡಲಾಗಿದೆ.