ಡೀಸೆಲ್ ಪೆಟ್ರೋಲ್ -ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

 


ವಿಜಯ ಸಂಘರ್ಷ


"ಕೆ.ಆರ್. ಪೇಟೆ : ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ, ಕೋವಿಡ್ 19 ರಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂಗಳ ಪರಿಹಾರಕ್ಕೆ ಒತ್ತಾಯಿಸಿ ತಾಲೂಕು ಜೆಡಿಎಸ್ ಪಕ್ಷದ ವತಿಯಿಂದ  ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಎನ್. ಶಿವಮೂರ್ತಿ ಅವರಿಗೆ ಇಂದು ಮನವಿ ಪತ್ರ ಸಲ್ಲಿಸಿದರು"

ಪಟ್ಟಣದ ಮಿನಿ ವಿಧಾನಸೌಧದ ಆವರಣದ ಬಳಿ ಪ್ರತಿಭಟನೆ ನಡೆಸಿದ ಜೆಡಿಎಸ್ ಮುಖಂಡರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ  ಜೆಡಿಎಸ್ ಅಧ್ಯಕ್ಷ ಜಾನಕಿರಾಮ್ ಕೇಂದ್ರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಕೂಡ ಹೆಚ್ಚಾಗಿದೆ. ಇದರಿಂದ ಜನಸಾಮಾನ್ಯರು ಜೀವನ ನಡೆಸುವುದು ಬಹಳ ಕಷ್ಟವಾಗಿದೆ ಈಗಾಗಲೇ ಜನರು ಸರ್ಕಾರ ವಿಧಿಸಿದ ಲಾಕ್ಡೌನ್ ನಿಂದ ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿವೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ನಿರ್ದೇಶಕ ಕೊರಟಿಕೆರೆ  ನಾಗೇಶ್, ಜೆಡಿಎಸ್ ಮುಖಂಡರಾದ ಬಸ್ ಕೃಷ್ಣೇಗೌಡ,  ಮನ್ಮುಲ್ ಮಾಜಿ ಅಧ್ಯಕ್ಷ ಎಂ.ಬಿ ಹರೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ಐನೂರಳ್ಳಿ  ಮಲ್ಲೇಶ್,  ಬೂಕನಕೆರೆ ಹುಲ್ಲೇಗೌಡ, ರಾಜಾಹುಲಿ ದಿನೇಶ್,  ಯುವ ಮುಖಂಡರಾದ ಕೆ ಎಸ್. ಸಂತೋಷ್, ಮುರುಕನಹಳ್ಳಿ ವಿಜಯ್ ಕುಮಾರ್, ಚೌಡಸಮುದ್ರ ಚಂದ್ರಶೇಖರ್ ಸೇರಿದಂತೆ ನೂರಾರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ತಹಸಿಲ್ದಾರ್ ಎಂ.ಶಿವಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ವರದಿ: ಸಿ. ಆರ್. ಜಗದೀಶ್, ಕೆ. ಆರ್ ಪೇಟೆ.,

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ
+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು