ಖಾಯಂ-ಗುತ್ತಿಗೆ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

 


ವಿಜಯ ಸಂಘರ್ಷ

ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಖಾಯಂ ಹಾಗು ಗುತ್ತಿಗೆ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೋರಾಟ ಆರಂಭಿಸಿದ್ದಾರೆ.

ಎರಡನೇ ದಿನವಾದ ಇಂದು ಸಹ ಕಾರ್ಖಾನೆ ಮುಂಭಾಗ ಕಪ್ಪುಪಟ್ಟಿ  ಧರಿಸಿ ಪ್ರಾಧಿಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ವೇತನ ಪರಿಷ್ಕರಣೆ ಅವಧಿ ಮುಕ್ತಾಯಗೊಂಡು ಸುಮಾರು 5 ವರ್ಷಗಳು ಕಳೆದರೂ ಸಹ ಇದುವರೆಗೂ ವೇತನ ಪರಿಷ್ಕರಣೆ ಮಾಡಿರುವುದಿಲ್ಲ.  ತಕ್ಷಣ ಖಾಯಂ ಹಾಗು ಗುತ್ತಿಗೆ ಕಾರ್ಮಿಕರಿಗೆ ವೇತನ ಪರಿಷ್ಕರಣೆ ಮಾಡುವಂತೆ ಒತ್ತಾಯಿಸಲಾಯಿತು.




    ಕಾರ್ಮಿಕರಿಗೆ ನ್ಯಾಯ ಸಮ್ಮತವಾಗಿ ಸಿಗಬೇಕಾದ ಶೇ.15 ಎಂಜಿಬಿ, ಶೇ.35 ಪರ್ಕ್ಸ್ ಹಾಗು ಶೇ.9 ಪೆನ್ಸನ್ ವಂತಿಗೆ ನೀಡುವ ಜೊತೆಗೆ ವೆಲೆಫೇರ್ ಅಲೋಯನ್ಸ್ ಹೆಚ್ಚಿಸುವಂತೆ ಹಾಗು ಕೋವಿಡ್-19 ಸೋಂಕಿಗೆ ಒಳಗಾದ ಕಾರ್ಮಿಕರ ಅವಲಂಬಿತರಿಗೆ ಉದ್ಯೋಗ ಕಲ್ಪಿಸಿಕೊಡುವಂತೆ ಆಗ್ರಹಿಸಲಾಯಿತು.

 ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಹೋರಾಟದ ನೇತೃತ್ವ ವಹಿಸಿದ್ದರು. ಪದಾಧಿಕಾರಿಗಳಾದ ಯು.ಎ ಬಸಂತ್‌ಕುಮಾರ್, ಕೆ.ಆರ್ ಮನು ಮತ್ತಿತರರು ಭಾಗವಹಿಸಿದ್ದರು. ನೂರಾರು ಖಾಯಂ ಹಾಗು ಗುತ್ತಿಗೆ ಕಾರ್ಮಿಕರು ಪಾಲ್ಗೊಂಡಿದ್ದರು. ಕಾರ್ಖಾನೆ ಮುಂಭಾಗ ಸತ್ಯಾಗ್ರಹ ನಾಳೆಯೂ ಮುಷ್ಕರ ನಡೆಯಲಿದೆ.

ವಿಜಯ ಸಂಘರ್ಷ ಕ್ಕೆ  ಸುದ್ದಿ 
ನೀಡಲು ಕರೆ ಮಾಡಿ 
+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು