ವಿಜಯ ಸಂಘರ್ಷ
ಭದ್ರಾವತಿ: ಕೋವಿಡ್ ನಿಯಂತ್ರಣಕ್ಕೆ ಕೇವಲ ನೆರವಿನ ಅಗತ್ಯ ಮಾತ್ರವಲ್ಲದೆ ಜಾಗೃತಿ ಸಹ ಅತಿ ಅವಶ್ಯಕವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಹಳೇನಗರದ ತರೀಕೆರೆ ರಸ್ತೆಯ ವಳ್ಳುವರ್ ಕಲ್ಯಾಣ ಮಂಟಪದಲ್ಲಿಂದು ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಬಡವರಿಗೆ ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸೋಂಕು ನಿಯಂತ್ರಣದಲ್ಲಿ ಗ್ರಾಮೀಣ ಜನರ ಪಾತ್ರ ಹೆಚ್ಚಿನದ್ದಾಗಿದ್ದು, ಎಲ್ಲೆಡೆ ಜಾಗೃತಿ ಅತಿ ಅವಶ್ಯಕವಾಗಿದೆ.
ಪ್ರಸ್ತುತ ಕೋವಿಡ್-19 ರ ಪರಿಣಾಮ ಪ್ರಪಂಚದಾದ್ಯಂತ ಹಲವಾರು ಸಂಕಷ್ಟ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಶಕ್ತಿ ಮೀರಿ ಶ್ರಮಿಸುತ್ತಿವೆ.
ಲೆಕ್ಕವಿಲ್ಲದಷ್ಟು ದಾನಿಗಳು, ಸ್ವಯಂ ಸೇವಾ ಸಂಸ್ಥೆಗಳು ತಮ್ಮದೇ ಆದೆ ರೀತಿಯಲ್ಲಿ ಸೇವೆಯನ್ನು ಸಲ್ಲಿಸುತ್ತಿವೆ. ಗ್ರಾಮಮಟ್ಟದಲ್ಲಿ ಜಾಗೃತಿ ಪಡೆ ಹಾಗು ಗ್ರಾಮಸ್ಥರು ಕೋವಿಡ್-19ರ ನಿಯಂತ್ರಣಕ್ಕೆ ಕೈಗೊಳ್ಳುತ್ತಿರುವ ಕ್ರಮಗಳು ಶ್ಲಾಘನೀಯವಾಗಿದ್ದು, ಪ್ರತಿ ಹಂತದ ಎಚ್ಚರಿಕೆ ಕ್ರಮಗಳು ನಿಯಂತ್ರಣಕ್ಕೆ ಸಹಕಾರಿಯಾಗಿವೆ. ಗ್ರಾಮೀಣಮಟ್ಟದಲ್ಲಿ ಅನುಸರಿಸು ತ್ತಿರುವ ಕ್ರಮಗಳನ್ನು ನಗರ ಮಟ್ಟದಲ್ಲೂ ಕೈಗೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ದೊಡ್ಡ ಮಟ್ಟದ ಜಾಗೃತಿ ಅಭಿಮಾನ ನಡೆಯಬೇಕಾಗಿದೆ ಎಂದರು.
ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಸಂಕಷ್ಟದ ಸಮಯದಲ್ಲಿ ಜನರಿಗೆ ನೆರವಾಗಬೇಕೆಂಬ ಉದ್ದೇಶದೊಂದಿಗೆ ನಗರಸಭೆ 35 ವಾರ್ಡ್‌ಗಳ ವ್ಯಾಪ್ತಿಯಲ್ಲಿನ ಅರ್ಹ ಕಡು ಬಡವರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ವಾರ್ಡ್‌ಗಳ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಗ್ರಿಗಳು ತಲುಪಬೇಕು. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಎಂಎಲ್ ಸಿ ಆರ್. ಪ್ರಸನ್ನಕುಮಾರ್, ಎಲ್ಲಾ ವಾರ್ಡ್‌ಗಳ ನಗರಸಭಾ ಸದಸ್ಯರು, ಎಸಿ, ಟಿ.ವಿ ಪ್ರಕಾಶ್, ಪೌರಾಯುಕ್ತ ಕೆ. ಪರಮೇಶ್, ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ
+91 9743225795