ವಿಜಯ ಸಂಘರ್ಷ
ಕೆ.ಆರ್ ಪೇಟೆ: ತಾಲೂಕಿನ ಕೊರೋನ ವಾರಿಯರ್ಸ್ ಗಳಿಗೆ ಆಹಾರ ಕಿಟ್ ವಿತರಣೆ ಮಾಡುವುದರ ಬಗ್ಗೆ ಇಂದು ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಬಿ. ನಾಗೇಂದ್ರಕುಮಾರ್ ಮತ್ತು ಕಿಕ್ಕೇರಿ ಸುರೇಶ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ: 23 ರಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪಟ್ಟಣಕ್ಕೆ ಆಗಮಿಸಲಿದ್ದು, ಕೊರೋನಾ ವಾರಿಯರ್ಸ್ ಗಳಿಗೆ ಆಹಾರ ಕಿಟ್ ಗಳನ್ನು ವಿತರಿಸಲಿದ್ದಾರೆ.
ಕೊರೋನಾ ವಾರಿಯರ್ಸ್ ಗಳಾದ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರಿಗೆ ಹಾಗೂ ಪೌರಕಾರ್ಮಿಕರಿಗೆ, ಕಾಂಗ್ರೆಸ್ ಪಕ್ಷದ ವತಿಯಿಂದ 30 ಲಕ್ಷ ರೂ ಮೌಲ್ಯದ ಕಿಟ್ ವಿತರಣೆ ಮಾಡುವ ಕಾರ್ಯಕ್ರಮ ಪಟ್ಟಣದ ಗ್ರಾಮ ಭಾರತಿ ಶಾಲೆಯ ಪಕ್ಕದ ಆವರಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಲಿದ್ದಾರೆ. ಎಲ್ಲಾ ಘಟಕಗಳ ಅಧ್ಯಕ್ಷರು, ಮುಖಂಡರು ಹಾಗೂ ಕಾರ್ಯಕರ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಭಾಗವಹಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಒಳಚರಂಡಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಗಮದ ಮಾಜಿ ಅಧ್ಯಕ್ಷ ಎಂ.ಡಿ ಕೃಷ್ಣಮೂರ್ತಿ, ಕೆಪಿಸಿಸಿ ಸದಸ್ಯ ನಾಗರಾಜು, ಒಬಿಸಿ ಘಟಕದ ಅಧ್ಯಕ್ಷ ಕೃಷ್ಣ, ಉಸ್ತುವಾರಿ ರಮೇಶ್, ಲಕ್ಷ್ಮಿಪುರ ಅಕ್ಕಿ ಮಂಜು, ಅಕ್ಕಿಹೆಬ್ಬಾಳು, ದಿವಾಕರ್ ಸೇರಿದಂತೆ ಮತ್ತಿತರರಿದ್ದರು.
ವರದಿ: ಸಿ.ಆರ್.ಜಗದೀಶ್ ಕೆ ಆರ್ ಪೇಟೆ
ಸುದ್ದಿ ಮಾಹಿತಿಗಾಗಿ ಸಂಪರ್ಕಿಸಿ
+91 9743225795