ವಿಜಯ ಸಂಘರ್ಷ
ಭದ್ರಾವತಿ : ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳ ಶಿಕ್ಷಣದ ಅಭಿವೃದ್ಧಿಗೆ ಕಂಪ್ಯೂಟರ್ ಮಹತ್ವ ಹೊಂದಿದ್ದು ಸರ್ಕಾರ ಉಚಿತವಾಗಿ ನೀಡುವ ಸಾಮಾಗ್ರಿಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಬಿ.ಕೆ.ಸಂಗಮೇಶ್ವರ್ ಕರೆ ನೀಡಿದರು.
ಅವರು ಇಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ, ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಬೊಮ್ಮನಕಟ್ಟೆ ಸರ್‌ಎಂವಿ ವಿಜ್ಞಾನ ಕಾಲೇಜು ಹಾಗು ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಹಾಗೂ ಐಸಿಟಿ ಕೊಠಡಿ ಉದ್ಘಾಟಿಸಿ ಮಾತನಾಡಿದರು.
ಶೈಕ್ಷಣಿಕ ಉದ್ದೇಶ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸವಾಲಾಗಿ ಸ್ವೀಕರಿಸಲು ಸಹಕಾರಿಯಾಗಲಿವೆ. ಶಿಕ್ಷಣದಿಂದ ಆರ್ಥಿಕ ಅಭಿವೃದ್ಧಿ, ಸಮಾಜ ಪರಿವರ್ತನೆ ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಆತ್ಮವಿಶ್ವಾಸ ಅಗತ್ಯ ಎಂದರು.
ಹೊಸಮನೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರಾದ ಡಾ. ವಿಷ್ಣುಮೂರ್ತಿ, ಡಾ. ರವೀಂದ್ರ, ಪ್ರೊ. ವರದರಾಜು,ಪ್ರಾಧ್ಯಾಪಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿ ಮಾಹಿತಿಗಾಗಿ ಸಂಪರ್ಕಿಸಿ
+91 9743225795
Nice and meaningful information thanku sir
ಪ್ರತ್ಯುತ್ತರಅಳಿಸಿ