ವಿಜಯ ಸಂಘರ್ಷ
ಬೆಂಗಳೂರು : ಕರ್ನಾಟಕದಲ್ಲಿ ಕೋವಿಡ್-19 ಸೋಂಕು ಇಳಿಮುಖ ವಾಗುತ್ತಿರುವ ಹಿನ್ನಲೆಯಲ್ಲಿ, ಸಿಎಂ ಬಿ.ಎಸ್.ಯಡಿಯೂರಪ್ಪ ನಿನ್ನೆ ಕೋವಿಡ್ ಉಸ್ತುವಾರಿ ಸಚಿವರು, ತಜ್ಞರು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅನ್ಲಾಕ್ -3.0 ಪ್ರಕ್ರಿಯೆಯನ್ನು ಘೋಷಿಸಿದರು.
ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿ ಘೋಷಣೆ ಮಾಡಿದ್ದಾರೆ. ನಾಳೆಯಿಂದ ಜು :19 ರವರೆಗೆ ಅನ್ಲಾಕ್ 3.0 ಅನ್ವಯಿಸಲಿದ್ದು, ರಾತ್ರಿ 9 ರಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂವನ್ನು ಜಾರಿ ಮಾಡಲಾಗಿದೆ. ಜಿಲ್ಲೆಗಳಲ್ಲಿ ಕೊರೋನಾ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ಡೌನ್ ಸಡಿಲಿಸಲಾಗಿದ್ದು, ಸೋಮವಾರದಿಂದ ಜನ ಜೀವನ ಸಹಜ ಸ್ಥಿತಿಗೆ ಮರಳಲಿದೆ.
ಜುಲೈ 5 ರಿಂದ 14 ದಿನಗಳ ಅನ್ಲಾಕ್ ಜಾರಿಗೊಳಿಸಲಾಗಿದೆ. ಮಾಲ್, ದೊಡ್ಡ ಹೊಟೇಲ್ ತೆರೆಯಲು ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ ಚಿತ್ರಮಂದಿರ ತೆರೆಯಲು ಅವಕಾಶ ಇಲ್ಲ. ಕೊಡಗು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಎಲ್ಲಾ ಚಟುವಟಿಕೆಗಳಿಗೆ ರಾತ್ರಿ 9 ಗಂಟೆವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಸಾರಿಗೆ ಬಸ್ ಪೂರ್ಣ ಪ್ರಮಾಣದಲ್ಲಿ ಸಂಚರಿಸಲು ಅವಕಾಶವನ್ನು ನೀಡಲಾಗಿದೆ. ಮಸೀದಿ, ಮಠ ಮಂದಿರ, ಚರ್ಚ್ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣ ವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು, ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳ ಜೊತೆಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ. ಕೋವಿಡ್-19 ನಿಯಂತ್ರಿಸುವ ದೃಷ್ಟಿ ಯಿಂದ ಸಾರ್ವಜನಿಕರು ಕಡ್ಡಾಯ ವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳು ವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನವನ್ನು ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿ ಮಾಡಲಾಗಿದೆ.
ಅನ್ಲಾಕ್ 3.0 ನ ಸಡಿಲಿಕೆಯ ಮಾರ್ಗಸೂಚಿಗಳು :
1 ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶವನ್ನು ನೀಡಲಾಗಿದೆ.
2 ಮಾಲ್ ಗಳನ್ನು ತೆರೆಯಲು ಅವಕಾಶವನ್ನು ನೀಡಲಾಗಿದೆ.
3 ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಯಾಣಿಕರೊಂದಿಗೆ ಸಂಚರಿಸಲು ಅವಕಾಶವನ್ನು ನೀಡಲಾಗಿದೆ.
4 ಧಾರ್ಮಿಕ ಸ್ಥಳಗಳಲ್ಲಿ ದೇವರ ದರ್ಶನಕ್ಕೆ ಅವಕಾಶವನ್ನು ನೀಡಲಾಗಿದೆ.
5 ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ. 100 ಜನರೊಂದಿಗೆ ಭಾಗವಹಿಸಲು ಅವಕಾಶವನ್ನು ನೀಡಲಾಗಿದೆ.
6 ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶವನ್ನು ನೀಡಲಾಗಿದೆ.
7 ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸವನ್ನು ಮಾಡಲು ಅವಕಾಶ ನೀಡಲಾಗಿದೆ.
8 ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶವನ್ನು ನೀಡಲಾಗಿದೆ.
9 ನೈರ್ಟ್ ಕರ್ಫ್ಯೂ ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಯಥಾ ಪ್ರಕಾರ ಜಾರಿಯಲ್ಲಿರುತ್ತದೆ.
10 ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ.
11 ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಯಾವ ಜಿಲ್ಲೆಯಲ್ಲಿಯೂ ಕೂಡ ಅವಕಾಶವಿಲ್ಲ.
12 ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಿ ಅದರ ಕುರಿತು ಮಾಹಿತಿ ನೀಡಲಾಗುವುದು.
13 ಪಬ್ ಗಳು ಕಾರ್ಯನಿರ್ವಹಿಸಲು ಅವಕಾಶ ಇಲ್ಲ.
14 ಬಾರ್ ಗಳಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
15 ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ಕಲ್ಪಿಸಿರುವುದಿಲ್ಲ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ
+91 9743225795