ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

 


ವಿಜಯ ಸಂಘರ್ಷ

ಶಿವಮೊಗ್ಗ: ವಸತಿ ಶಾಲೆಗಳಲ್ಲಿ 2021-22 ನೇ ಸಾಲಿಗೆ 6ನೇ ತರಗತಿ ಸೇರ್ಪಡೆಗೆ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(ಕ್ರೈಸ್) ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ 32 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ/ಸಂಗೊಳ್ಳಿ ರಾಯಣ್ಣ/ಡಾ.ಬಿ.ಆರ್. ಅಂಬೇಡ್ಕರ್/ ಇಂದಿರಾಗಾಂಧಿ/ಅಟಲ್ ಬಿಹಾರಿ  ವಾಜಪೇಯಿ ವಸತಿ ಶಾಲೆಗಳಲ್ಲಿ 2021-22 ನೇ ಸಾಲಿಗೆ 6ನೇ ತರಗತಿ ಸೇರ್ಪಡೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರವೇಶ ಪರೀಕ್ಷೆ ನಡೆಸಲಿದ್ದು ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ .

ಜು: 28 ರಿಂದ ಅರ್ಜಿ ಸಲ್ಲಿಕೆ ಅವಧಿ ಆರಂಭವಾಗಲಿದ್ದು ಆ: 10 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ. ಸೆ: 16 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಅರ್ಜಿಯೊಂದಿಗೆ ವಿದ್ಯಾರ್ಥಿಯ ಎಸ್‍ಎಟಿಎಸ್ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ(ವಾರ್ಷಿಕ ಆದಾಯ ಮಿತಿ ಎಸ್‍ಸಿ/ಎಸ್‍ಟಿ/ಪ್ರ-1 ರೂ.2,50,000, 2ಎ, 2ಬಿ, 3ಎ, 3ಬಿ ರೂ.100000) ವಿದ್ಯಾರ್ಥಿಯ ಇತ್ತೀಚಿನ 2 ಭಾವಚಿತ್ರ, ಇತರೆ ಮೀಸಲಾತಿ ಕೋರುವ ಪ್ರಮಾಣ ಪತ್ರಗಳು, ಇತರೆ ಮೀಸಲಾತಿ ಪ್ರಮಾಣ ಪತ್ರಗಳೆಂದರೆ ವಿಶೇಷ ಚೇತನ ಮಗು, ಅಲೆಮಾರಿ/ಅರೆ ಅಲೆಮಾರಿ/ಸೂಕ್ಷ್ಮ/ಅತಿ ಸೂಕ್ಷ್ಮ ಮಗು, ಮಾಜಿ ಸೈನಿಕರ ಮಗು, ಆಶ್ರಮ/ವಸತಿ ಶಾಲೆ ಮಗು, ಪೌರಕಾರ್ಮಿಕರ/ಸಫಾಯಿ ಕರ್ಮಚಾರಿಗಳ ಮಗು, ಬಾಲ ಕಾರ್ಮಿಕ, ವಿಧವೆ, ವಿಧುರ, ದೇವದಾಸಿ, ಯೋಜನಾ ನಿರಾಶ್ರಿತರ ಮಗು, ಅನಾಥ ಮಗು, ಹೆಚ್‍ಐವಿ ಪೀಡಿತ ಮಗು, ಆತ್ಮಹತ್ಯೆ ರೈತರ ಮಗು, ಸ್ಥಳೀಯ ಅಭ್ಯರ್ಥಿ(ಸ್ಥಳೀಯ ಅಭ್ಯರ್ಥಿ ಎಂದರೆ ಸ್ವಂತ ತಾಲ್ಲೂಕಿನ ಅಭ್ಯರ್ಥಿ).ವಿಶೇಷ ವರ್ಗಕ್ಕೆ ಸೇರಿದಲ್ಲಿ ಸಂಬಂಧಿತ ಸಕ್ಷಮ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ ಸಲ್ಲಿಸುವುದು.

ಅಭ್ಯರ್ಥಿಯು ತನ್ನ ಸ್ವಂತ ಜಿಲ್ಲೆಯ ವಸತಿ ಶಾಲೆಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ(ಸ್ವಂತ ಎಂದರೆ ಜಾತಿ ಪ್ರಮಾಣ ಪತ್ರ ಅಥವಾ ಆಧಾರ್ ಕಾರ್ಡ್‍ನಲ್ಲಿ ನಮೂದಿಸಿರುವ ಜಿಲ್ಲೆ) ಹಾಗೂ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಪ್ರಕಟಣೆ ತಿಳಿಸಿದೆ.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು