ಪ್ರಸಕ್ತ ಸಾಲಿನಲ್ಲಿ 8ಲಕ್ಷ ಟನ್ ಕಬ್ಬು ಅರೆಯುವ ಗುರಿ: ವಿ.ಜೆ.ರವಿರೆಡ್ಡಿ

 


ರವಿರೆಡ್ಡಿ ದಂಪತಿಗಳಿಂದ ವಿಶೇಷ ಪೂಜೆ, ಹೋಮ ಹವನ
ಕಾರ್ಖಾನೆಯಲ್ಲಿ ಹಬ್ಬದ ವಾತಾವರಣ.. ಮುಗಿಲು ಮುಟ್ಟಿದ ಸಂಭ್ರಮ'

ವಿಜಯ ಸಂಘರ್ಷ

ಕೆ.ಆರ್.ಪೇಟೆ : ತಾಲ್ಲೂಕಿನ ರೈತರ ಜೀವನಾಡಿಯಾಗಿರುವ ಕೋರಮಂಡಲ್ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಸಾಲಿನ ಕಬ್ಬು ಹಂಗಾಮಿನಲ್ಲಿ ಜು-16ರಿಂದ ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಲಿದ್ದು ಇಂದು ಕಾರ್ಖಾನೆಯ ಹಿರಿಯ ಉಪಾಧ್ಯಕ್ಷ ರವಿರೆಡ್ಡಿ ದಂಪತಿಗಳು ಕಾರ್ಖಾನೆಯ ಆವರಣದಲ್ಲಿ ಹೋಮಹವನ ನಡೆಸಿ ಯಂತ್ರೋಪಕರಣಗಳು ಹಾಗೂ ಬಾಯ್ಲರ್ ಗೆ ವಿಶೇಷಪೂಜೆ ಸಲ್ಲಿಸಿದರು.



2021-22 ನೇ ಸಾಲಿನಲ್ಲಿ ಕಾರ್ಖಾನೆಯು 8 ಲಕ್ಷ ಟನ್ ಕಬ್ಬು ಅರೆಯುವ ಗುರಿಯನ್ನು ಹೊಂದಿದ್ದು,  ಕಾರ್ಖಾನೆಗೆ ಕಬ್ಬು ಬೆಳೆಗಾರರು ಸರಬರಾಜು ಮಾಡಿರುವ ಕಬ್ಬಿನ ಬಾಕಿ ಹಣವನ್ನು ಸಂಪೂರ್ಣವಾಗಿ ಪಾವತಿಸಿರುವ ಏಕೈಕ ಸಕ್ಕರೆ ಕಾರ್ಖಾನೆಯೆಂಬ ಹೆಗ್ಗಳಿಕೆಗೆ ಕೋರಮಂಡಲ್ ಸಕ್ಕರೆ ಕಾರ್ಖಾನೆ ಪಾತ್ರವಾಗಿದೆ. ರೈತರು ಬೆಳೆದಿರುವ ಕಬ್ಬನ್ನು ಆಧ್ಯತೆಯ ಮೇರೆಗೆ ಅರೆಯಲು ಕಾರ್ಖಾನೆಯು ಬದ್ಧವಾಗಿದ್ದು ತಾಲ್ಲೂಕಿನ ಕಬ್ಬು ಬೆಳೆಗಾರರು ಎಂದಿನಂತೆ ಕಾರ್ಖಾನೆಗೆ ಕಬ್ಬನ್ನು ಸರಬರಾಜು ಮಾಡಬೇಕು ಎಂದು ಕಾರ್ಖಾನೆಯ  ರವಿರೆಡ್ಡಿ ಮನವಿ ಮಾಡಿದರು.

ತಾಲ್ಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕಾರಿಗನಹಳ್ಳಿ ಕುಮಾರ್, ಕಬ್ಬು ವಹಿರಿಯ ವ್ಯವಸ್ಥಾಪಕ ಕೆ.ಬಾಬೂರಾಜ್, ಮಾನವ ಸಂಪನ್ಮೂಲ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಕಿಕ್ಕೇರಿ ಸಿಪಿಐ  ಜಗಧೀಶ್, ಪಿಎಸೈ ನವೀನ್ ಸೇರಿದಂತೆ ತಾಲ್ಲೂಕಿನ ಕಬ್ಬು ಬೆಳೆಗಾರರು ಹಾಗೂ ಪ್ರಗತಿಪರ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ: ಸಿ. ಆರ್. ಜಗದೀಶ್ ಕೆ.ಆರ್. ಪೇಟೆ

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ 
+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು