ಇನ್ನೆರಡುದಿನ ವ್ಯಾಪಕ ಮಳೆ ಬೀಳುವ ಸಾಧ್ಯತೆ : ಹವಮಾನ ಇಲಾಖೆ ಸ್ಪಷ್ಟನೆ

 


ವಿಜಯ ಸಂಘರ್ಷ

ಶಿವಮೊಗ್ಗ :ಕರ್ನಾಟಕದ ಕರಾವಳಿ ಮತ್ತು ಮಹಾರಾಷ್ಟ್ರ ಪ್ರದೇಶದಲ್ಲಿ ವಾಯು ಭಾರ ಕುಸಿಯುವ ಸಾಧ್ಯತೆ ಇನ್ನೆರಡುದಿನ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ.

ನಿನ್ನೆ ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ನಿರಂತರ ಮಳೆಯಾಗಿದೆ. ಜಿಲ್ಲೆಯ ಹೊಸನಗರದಲ್ಲಿ ಅತೀ ಹೆಚ್ಚು  12 ಸೆಂಮೀ ಮಳೆಯಾಗಿದ್ದು ಚಿಕ್ಕಮಗ ಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 6 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯದಲ್ಲಿ 7 ಸೆಂ.ಮೀ ಮಳೆಯಾಗಿದೆ.

ಜು: 23ರ ವೇಳೆಗೆ ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಜು: 24ರವರಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

ಇನ್ನು ಹಾಸನ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಿಗೆ ಜು: 22 ಮತ್ತು 23ಕ್ಕೆ ಆರೆಂಜ್ ಅಲರ್ಟ್ ಘೋಷಣೆ ಯಾಗಿದೆ. ಉಳಿದಂತೆ ಬೆಳಗಾವಿ, ಧಾರವಾಡ, ಬೀದರ್, ಕಲ್ಬುರ್ಗಿ, ಬಾಗಲಕೋಟೆ ಜಿಲ್ಲೆಗಳಿಗೆ ಜು: 22 ಮತ್ತು 23ಕ್ಕೆ ಎಲ್ಲೋ ಅಲರ್ಟ್ ನೀಡಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 2 ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ತಡರಾತ್ರಿಯವರಗೆ ಕಲಬುರಗಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಕಲ್ಬುರ್ಗಿ ನಗರ ಸೇರಿ ಜಿಲ್ಲೆಯ ಹಲವೆಡೆ ಧಾರಾಕರ ಮಳೆಯಾಗಿದ್ದು ರೈತರಲ್ಲಿ ಆತಂಕ ಹೆಚ್ಚಿಸಿದೆ. ಭಾರಿ ಮಳೆಗೆ ಈಗಾಗಲೇ ರೈತರ ನೂರಾರು ಎಕರೆ ಬೆಳೆ ಹಾನಿಯಾಗಿದೆ. ಧಾರಾಕಾರ ಮಳೆಗೆ ಜನ ಜೀವನ ಅಸ್ಥವ್ಯಸ್ಥವಾಗಿದ್ದು ವಾಹನ ಸವಾರರು ಪರದಾಡು ವಂತಾಗಿತ್ತು. ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಇಡೀ ದಿನ ಮೋಡ ಕವಿದ ವಾತಾವರಣ ಇದ್ದು ಆಗಾಗ ಎನ್ನುವಂತೆ ಮಳೆಯಾಗುತ್ತಿದೆ.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು