ವಿಜಯ ಸಂಘರ್ಷ
ಭದ್ರಾವತಿ: ಸಾಮಾಜಿಕ ಹೋರಾಟ ಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ನೊಂದ ಬಡವರ ಪರ ನ್ಯಾಯದ ಪರವಾಗಿ ಧ್ವನಿಯಾಗಿದ್ದ, ಸ್ನೇಹಮುಖಿಯಾಗಿದ್ದ ಗಿರೀಶ್ ನಿಧನ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಹೇಳಿದರು.
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ, ಸಾಮಾಜಿಕ ಹೋರಾಟಗಾರ ಬಿ.ವಿ ಗಿರೀಶ್ ಇತ್ತೀಚೆಗೆ ನಿಧನ ಹೊಂದಿದ್ದು, ಮಿನಿವಿಧಾನಸೌಧ ಆವರಣದಲ್ಲಿ ವಿವಿಧ ಸಂಘಟನೆ ಗಳಿಂದ ಸಂತಾಪ ಸೂಚಕ ಸಭೆ ನಡೆಸಿ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದರು.
ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಮಾತನಾಡಿ, ನ್ಯಾಯಯುತ ಹೋರಾಟವನ್ನು ಮುಡುಪಾಗಿಸಿಕೊಂಡು ಜನರ ಸಂಕಷ್ಟಗಳಿಗೆ ಸ್ಪಂದಿಸುವ ಗುಣಹೊಂದಿದ್ದ ಗಿರೀಶ್ ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲೆಂದು ಪ್ರಾರ್ಥಿಸಿದರು.
ಮೃತ ಗಿರೀಶ್ ತಂದೆ, ತಾಯಿ, ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ, ಸಾಮಾಜಿಕ ಹೋರಾಟಗಾರ ಶಿವಕುಮಾರ್, ಬಿ.ವಿ ಗಿರೀಶ್ ಅಭಿಮಾನಿಗಳ ಸಂಘದ ವಿವೇಕ್ ಪ್ರಶಾಂತ್, ಕರ್ನಾಟಕ ರಕ್ಷಣಾ ವೇದಿಕೆಯ ಸಂದೇಶ್ ಗೌಡ, ನಗರಸಭೆ ಮಾಜಿ ಸದಸ್ಯ ವೆಂಕಟಯ್ಯ, ಸತೀಶ್ ಮತ್ತಿತರರು ಪಾಲ್ಗೊಂಡಿದ್ದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ
+91 9743225795