ವಿಜಯ ಸಂಘರ್ಷ
ಭದ್ರಾವತಿ : ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು. ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಕ್ರಮೇಣಹೆಚ್ಚಾಗುತ್ತಿದೆ.
ಜು :26 ರಂದು ಜಲಾಶಯದ ನೀರಿನ ಮಟ್ಟ 180 ಗಿಂತ ಹೆಚ್ಚಾಗಿರುತ್ತದೆ. ಪ್ರಸ್ತುತ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣ 18000- 20000 ಕ್ಯೂಸೆಕ್ಸ್ ಇದ್ದು, ಮುಂದಿನ ದಿನಗಳಲ್ಲಿ ಹೆಚ್ಚನ ಮಳೆಯಾಗುವ ಸಂಭವವಿದ್ದು, ಇದೇ ರೀತಿ ಮುಂದು ವರೆದಲ್ಲಿ ಭದ್ರಾ ಜಲಾಶಯವು ಗರಿಷ್ಟ ನೀರಿನ ಮಟ್ಟ 186 ಕ್ಕೆ ಅತೀ ಶೀಘ್ರವಾಗಿ ಭರ್ತಿಯಾಗುವ ಸಂಭವವಿದೆ.
ಅಣೆಕಟ್ಟು ಸುರಕ್ಷತೆಯ ಹಿತದೃಷ್ಟಿ ಯಿಂದ ಯಾವ ಸಮಯದಲ್ಲಾದರೂ ಒಳಹರಿವಿನ ಪ್ರಮಾಣಕ್ಕೆ ಅನುಗುಣವಾಗಿ ಸ್ಪೇಶಲ್ ವೇ ಗೇಟ್ ಮುಖಾಂತರ ನದಿಗೆ ಬಿಡಲಾಗುವುದು. ಅದುದರಿಂದ ಭದ್ರಾ ನದಿಯ ಎಡ ಮತ್ತು ಬಲದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕಾಗಿ ಈ ಮೂಲಕ ಕೋರಲಾಗಿದೆ. ನದಿಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಲು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಎಂ. ಚಂದ್ರಹಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795