ವಿಜಯ ಸಂಘರ್ಷ
ಕೆ ಆರ್ ಪೇಟೆ: ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ತಾಲ್ಲೂಕಿನ ಕಸಬಾ ಹೋಬಳಿ ಯ ಕತ್ತರಘಟ್ಟ ಗ್ರಾಮದಲ್ಲಿ ಮನೆಯೊಂದು ಕುಸಿದ ಪರಿಣಾಮ ವೃದ್ಧ ರೈತನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ತಾಲೂಕಿನ ಕತ್ತರಘಟ್ಟ ಗ್ರಾಮದ ನಿವಾಸಿ ಬೋರೇಗೌಡ (68) ಮೃತ ದುರ್ದೈವಿ. ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ದಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಸ್ಥಳದಲ್ಲಿಯೇ ನಿಧನರಾಗಿದ್ದಾರೆ.
ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತರು ಪತ್ನಿ ಇಬ್ಬರು ಹೆಣ್ಣು ಮತ್ತು ಇಬ್ಬರು ಗಂಡು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.
ಈ ಹಿನ್ನಲೆಯಲ್ಲಿ ಕುಟುಂಸ್ಥರು ಬೀದಿಗೆ ಬಿದ್ದಂತಾಗಿದೆ. ಆದ್ದರಿಂದ ಕೂಡಲೇ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಪರಿಶೀಲಿಸಿ, ಮೃತನ ಕುಟುಂಬಕ್ಕೆ ಮನೆ ಕಟ್ಟಿಕೊಳ್ಳಲು ಅಗತ್ಯ ನೆರವನ್ನು ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪ್ರಕರಣ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.
ವರದಿ: ಸಿ.ಆರ್. ಜಗದೀಶ್, ಕೆ ಆರ್ ಪೇಟೆ
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

