ಅಂಜನಾಪುರ ಜಲಾಶಯ ಭರ್ತಿ: ಬಿವೈಆರ್ ಕುಟುಂಬ ಸ್ಥರಿಂದ ಬಾಗಿನ ಅರ್ಪಣೆ

 


ವಿಜಯ ಸಂಘರ್ಷ

ಶಿಕಾರಿಪುರ : ತಾಲೂಕಿನ ಜೀವನಾಡಿ ಅಂಜನಾಪುರ ಜಲಾಶಯ ಭರ್ತಿಯಾಗಿದ್ದು, ಸಂಸದ ಬಿ.ವೈ. ರಾಘವೇಂದ್ರ ಪತ್ನಿ ತೇಜಸ್ವಿನಿ ಜೊತೆ ಇಂದು ಗಂಗಾ ದೇವಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಅಂಜನಾಪುರ ಜಲಾಶಯ ತಾಲೂಕಿನ ಜೀವನಾಡಿಯಾಗಿದೆ. ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ, ಕೃಷಿಗೆ ಚಟುವಟಿಕೆಯ ನೀರಿಗಾಗಿ ಈ ಜಲಾಶಯವನ್ನೇ ಅವಲಂಭಿಸಲಾಗಿದೆ.

ಅಂಜನಾಪುರ ಜಲಾಶಯ 1.80 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಹೊಸನಗರ ತಾಲೂಕಿನಲ್ಲಿ ಹುಟ್ಟುವ ಕುಮದ್ವತಿ ನದಿಯು ಹರಿದು ಶಿಕಾರಿಪುರ ತಾಲೂಕಿನ ಮೂಲಕ ಹಾವೇರಿ ಜಿಲ್ಲೆಯ ಮದಗದ ಕೆರೆಗೆ ಸೇರುತ್ತದೆ. ಹೀಗೆ, ಹರಿಯುವ ಕುಮದ್ವತಿ ನದಿಗೆ ತಾಲೂಕಿನ ಅಂಜನಾಪುರ ಗ್ರಾಮದ ಬಳಿ ಸಣ್ಣ ಬ್ಯಾರೇಜ್ ನಿರ್ಮಾಣ ಮಾಡಲಾಗಿದೆ.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ 
+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು