ವಿಜಯ ಸಂಘರ್ಷ
ಬೆಂಗಳೂರು: ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜಕೀಯ ಬೆಳವಣಿಗೆ ಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗ ಬಾರದೆಂದು ವಿನಂತಿಸುತ್ತೇನೆ.
ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರ ಬಾರದು ಎಂದು ಕೇಳಿಕೊಂಡಿದ್ದಾರೆ.ಪಕ್ಷ ನನಗೆ ಮಾತೃ ಸಮಾನ, ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಟ್ವೀಟ್ ಮಾಡಿದ್ದಾರೆ.
ಟ್ವೀಟ್ ಮಾಡಿದ್ದು ಯಾಕೆ.?
ಯಡಿಯೂರಪ್ಪ ರಾಜೀನಾಮೆ ನೀಡುವುದು ಪಕ್ಕಾ ಆಗುತ್ತಿರು ವಂತೆಯೇ ಅವರ ಪರವಾಗಿ ಪ್ರಬಲ ಲಾಬಿ ಶುರುವಾಗಿದೆ. ಸ್ವಾಮೀಜಿಗಳು ಅವರಪರವಾಗಿ ಹೈಕಮಾಂಡ್ ಮೇಲೆ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆ. ರಾಜೀನಾಮೆ ನೀಡಬೇಡಿ ಎಂದು ಸಿಎಂ ಮೇಲೆ ಬೆಂಬಲಿಗ ನಾಯಕರು ಒತ್ತಡ ಹೇರುತ್ತಿದ್ದಾರೆ. ಆದರೆ ಸಿ.ಎಂ. ಬಿ.ಎಸ್ ಯಡಿಯೂರಪ್ಪ ಮಾತ್ರ ರಾಜೀನಾಮೆ ನೀಡುವ ತಮ್ಮ ನಿರ್ಧಾರಕ್ಕೆ ಕಟಿಬದ್ಧ ರಾಗಿದ್ದಾರೆ. ಹೈಕಮಾಂಡ್‍ಗೆ ಕೊಟ್ಟ ಮಾತಿನಂತೆ, ಮೋದಿ-ಷಾ ನೀಡಿದ ಸೂಚನೆಯಂತೆ ಬಿಎಸ್‍ವೈ ನಡೆದುಕೊಳ್ಳಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಉನ್ನತ ಮೂಲಗಳ ಮಾಹಿತಿ ಪ್ರಕಾರ, ಸರ್ಕಾರಕ್ಕೆ 2 ವರ್ಷ ತುಂಬಿದ ದಿನವೇ ಅಂದರೆ ಜು: 26ರಂದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿ ದ್ದಾರೆ. ಸಿದ್ದಗಂಗಾ ಶ್ರೀಗಳ ನೇತೃತ್ವದ ಸ್ವಾಮೀಜಿಗಳ ನಿಯೋಗದ ಜೊತೆ ಯಡಿಯೂರಪ್ಪ ಮಾತಾಡುತ್ತಾ ರಾಜೀನಾಮೆ ಸುಳಿವು ನೀಡಿದ್ದಾರೆ. ಇದಕ್ಕೆ ಪೂರಕವಾಗಿ ವೇದಿಕೆಯೂ ರೆಡಿ ಆಗುತ್ತಿದೆ. ಇನ್ನು ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಹೈಕಮಾಂಡ್ ಪರವಾಗಿ ವೀಕ್ಷಕರು ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795