ವಿಜಯ ಸಂಘರ್ಷ
ಶಿವಮೊಗ್ಗ: ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಂಸಿಎಫ್3, 4 ಮತ್ತು 20 ಮಾರ್ಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರು ವುದರಿಂದ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಪ್ರದೇಶಗಳಲ್ಲಿ ಜು.15ರ ನಾಳೆ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ.?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರ ಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿ ಗ್ರಾಮ, ಕಿಯೋನಿಕ್ಸ್ ಐ.ಟಿ. ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾ ಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795
