ವಿಜಯ ಸಂಘರ್ಷ
ಭದ್ರಾವತಿ: ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಕೆಎಸ್ ಆರ್ ಟಿಸಿ ಬಸ್‌ಗಳ ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಘಟಕ ವ್ಯವಸ್ಥಾಪಕರಿಗೆ ಕರುನಾಡು ಸಂರಕ್ಷಣಾ ವೇದಿಕೆ ವತಿಯಿಂದ ಇಂದು ಮನವಿ ಸಲ್ಲಿಸಲಾಯಿತು.
ಕೋವಿಡ್-19 ರ ಹಿನ್ನಲೆಯಲ್ಲಿ ಜನಸಾಮಾನ್ಯರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಲಾಕ್‌ಡೌನ್ ಅವಧಿಯಲ್ಲಿ ಸ್ಥಗಿತಗೊಂಡಿರುವ ಬಸ್‌ಗಳ ಸಂಚಾರವನ್ನು ಇದುವರೆಗೂ ಆರಂಭಿಸಿಲ್ಲ. ಈಗಾಗಲೇ ಖಾಸಗಿ ಬಸ್‌ಗಳ ಸಂಚಾರ ಆರಂಭಗೊಂಡಿದ್ದು, ಖಾಸಗಿ ಬಸ್‌ಗಳು ದುಬಾರಿ ದರ ನಿಗದಿಪಡಿಸಿರುವುದರಿಂದ ಕೂಲಿ ಕಾರ್ಮಿಕರು, ಕೃಷಿಕರು ಸೇರಿದಂತೆ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ಸರ್ಕಾರಿ ಬಸ್‌ಗಳ ಸಂಚಾರ ಆರಂಭಿಸಿ ಅನುಕೂಲ ಕಲ್ಪಿಸಿಕೊಡುವಂತೆ ಮನವಿಯಲ್ಲಿ ಕೋರಲಾಗಿದೆ.
ವೇದಿಕೆ ಜಿಲ್ಲಾಧ್ಯಕ್ಷ ಶಿವಮೂರ್ತಿ, ರಾಜ್ಯ ಸಂಚಾಲಕ ಎಂ. ನಂಜುಂಡಪ್ಪ, ರಾಜಶೇಖರ್, ಮಂಜಾನಾಯ್ಕ, ರವಿನಾಯ್ಕ ಮತ್ತು ಚಂದ್ರಶೇಖರ್ ಮತ್ತಿತರರು ಭಾಗವಹಿಸಿದ್ದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795