ಶೈಕ್ಷಣಿಕ ಗೊಂದಲ ನಿವಾರಣೆಗೆ ರಾಜ್ಯಾದ್ಯಂತ ಆಮ್ ಆದ್ಮಿಪಕ್ಷದಿಂದ ಸಹಿ ಸಂಗ್ರಹಣೆ

 


ವಿಜಯ ಸಂಘರ್ಷ

ಬೆಂಗಳೂರು: ಶೈಕ್ಷಣಿಕ ಗೊಂದಲಗಳ ನಿವಾರಣೆಗಾಗಿ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷ ಸಹಿಸಂಗ್ರಹಿಸಲು ಮುಂದಾಗಿದ್ದು, ಸರ್ಕಾರದ ಶೈಕ್ಷಣಿಕವ ವೈಫಲ್ಯ ಖಂಡಿಸಿ ಜನಾಜಾಗೃತಿ ರೂಪಿಸಲು ಕಾರ್ಯಕ್ರಮ ಹಮ್ಮಿಕೊಂಡಿದೆ.

ಜು.5 ರ ಸೋಮವಾರ ಬೆಳಿಗ್ಗೆ ಬೆಂಗಳೂರು ನಗರದ ಸಂಪಂಗಿ ರಾಮನಗರ ವಾರ್ಡಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಸಹಿಸಂಗ್ರಹಣಾ ಅಭಿಯಾನಕ್ಕೆ ಮನೆಮನೆಗೆ ತೆರಳುವ ಮೂಲಕ ಚಾಲನೆ ನೀಡಲಿದ್ದಾರೆ.ಇದೇ ಸಮಯದಲ್ಲಿ ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸಹ ಈ ಅಭಿಯಾನಕ್ಕೆ ಚಾಲನೆ ದೊರಕಲಿದೆ.

ಈ ಸಂಬಂಧ ಬೆಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ,ರಾಜ್ಯದಲ್ಲಿ ತಲೆದೋರಿರುವ ಶೈಕ್ಷಣಿಕ ಶುಲ್ಕಗಳು , ಸರ್ಕಾರಿ ಶಾಲೆಗಳ ದುರ್ವ್ಯವಸ್ಥೆ , ಖಾಸಗಿ ಶಿಕ್ಷಕರ ಸಮಸ್ಯೆ , ಶುಲ್ಕ ನಿಯಂತ್ರಣ ಪ್ರಾಧಿಕಾರದ ರಚನೆ ಸೇರಿದಂತೆ ಹಲವಾರು ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರವು ಸಂಪೂರ್ಣ ವೈಫಲ್ಯಗೊಂಡಿದೆ. ಸರ್ಕಾರದ ಹೊಣೆಗೇಡಿತನದ ಪರಿಣಾಮವಾಗಿ ಇಂದು ರಾಜ್ಯದಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ವ್ಯವಸ್ಥೆ ಸಾಕಷ್ಟು ಸಂಕಷ್ಟಕ್ಕೀಡಾಗಿದೆ. ಶಾಲಾ ಶುಲ್ಕ ಗಳ ವಿಚಾರದಲ್ಲಿಯೂ ಸಹ ಪೋಷಕ ವರ್ಗ ಸಮಸ್ಯೆಗೀಡಾಗಿದೆ.ಈ ಎಲ್ಲ ಗೊಂದಲಗಳಿಂದಾಗಿ ಲಕ್ಷಾಂತರ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರದ ಈ ಎಲ್ಲಾ ವೈಫಲ್ಯಗಳನ್ನು ಬಗೆಹರಿಸಲು ಒತ್ತಾಯಿಸುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ಸಾವಿರಾರು ಕಾರ್ಯಕರ್ತರು ಗಳು ಸತತ 15 ದಿವಸಗಳ ಕಾಲ ರಾಜ್ಯದಾದ್ಯಂತ ಎಲ್ಲ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಕನಿಷ್ಠ 5 ಲಕ್ಷ ಮನೆಗಳಿಗೆ ತೆರಳಿ ಸಹಿ ಸಂಗ್ರಹಣೆ ಹಾಗೂ ಬೃಹತ್ ಜನಾಂದೋಲನ ಕಾರ್ಯ ಕ್ರಮವನ್ನು ನಡೆಸುವವರಿದ್ದಾರೆ.ಹೀಗಾಗಿ ಪಕ್ಷದ ವತಿಯಿಂದ ಸಹಿಸಂಗ್ರಹಣೆ ಜನಜಾಗೃತಿ ಹಮ್ಮಿಕೊಳ್ಳಲಾಗಿದೆ. ಕರಪತ್ರ, ಎಲ್.ಇ.ಡಿ ವಾಹನ, ವಿಚಾರಗೋಷ್ಠಿ ಗಳು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಈ ಅಭಿಯಾನವನ್ನು ಯಶಸ್ವಿಯಾಗಿಸಲು ಈಗಾಗಲೇ ಹಲವು ರೂಪುರೇಷೆಗಳನ್ನು ಪಕ್ಷವು ಕೈಗೊಂಡಿದೆ ಎಂದರು.

ಸಂಘರ್ಷಕ್ಕೆ ಸುದ್ದಿ ನೀಡಲು ಕರೆ
ಮಾಡಿ 
+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು