ರೈಲಿಗೆ ಸಿಲುಕಿ ಸಾವನ್ನಪ್ಪಿದ್ದ ವ್ಯಕ್ತಿಯ ಗುರುತು ಪತ್ತೆ

 ವಿಜಯ ಸಂಘರ್ಷ


ಸಾಗರ: ತಾಲೂಕಿನ ಗುಡ್ಡೆಕೌತಿ ಬಳಿ ರೈಲಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿದೆ. ರೈಲ್ವೆ ಪೊಲೀಸರು ವ್ಯಕ್ತಿಯ ಮಾಹಿತಿ ಕಲೆ ಹಾಕಿ, ಆತನ ಸಂಬಂಧಿಕರಿಗೆ ವಿಚಾರ ತಿಳಿಸಿದ್ದಾರೆ.

ಮೃತನು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕು ನಾಗನೂರು ಬಸವರಾಜ್ (36) ಎಂದು ಗುರುತಿಸಲಾಗಿದೆ.

ಬಿ.ಹೆಚ್.ರಸ್ತೆಯಲ್ಲಿ ಬಸವರಾಜ್‍ ನಂದಿನಿ ಹಾಲಿನ ಬೂತ್ ನಡೆಸುತ್ತಿ ದ್ದರು. ರೈಲಿಗೆ ಸಿಲುಕಿ ಸಾವನ್ನಪ್ಪಲು ಕಾರಣವೇನು ಎಂಬುದರ ಕುರಿತು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು