ವಿಜಯ ಸಂಘರ್ಷ
ಭದ್ರಾವತಿ: ಅಧಿಕಾರ ಸ್ವೀಕರಿಸಿ ಕೆಲವೇ ತಿಂಗಳುಗಳಲ್ಲಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಅವರನ್ನು
ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದೆ.
ತಹಸೀಲ್ದಾರ್ ಗ್ರೇಡ್-1 ಅಧಿಕಾರಿ ಯಾಗಿರುವ ಸಂತೋಷ್ ಕುಮಾರ್ ಅವರು ಕಳೆದ ವರ್ಷ ನವಂಬರ್‌ನಲ್ಲಿ ಅಧಿಕಾರ ಸ್ವೀಕರಿಸಿದ್ದರು. ಕೋವಿಡ್- 19 ರ ನಡುವೆಯೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಏಕಾಏಕಿ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ.
ಅವರಿಂದ ತೆರವಾದ ಹುದ್ದೆಗೆ ಜಿಲ್ಲಾ ನಗರಾಭಿವೃದ್ಧಿ ಕೋಶ ಪುರಸಭಾ ತಹಸೀಲ್ದಾರ್ ಆರ್. ಪ್ರದೀಪ್ ಅವರನ್ನು ನೇಮಕಗೊಳಿಸಲಾಗಿದೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795
