ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಪ್ರಯಾಣ ಉಚಿತ


 

ವಿಜಯ ಸಂಘರ್ಷ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಾಮಾನ್ಯ ಸೇವೆಗಳಲ್ಲಿ ಉಚಿತವಾಗಿ ಪ್ರಯಾಣಿ ಸಲು ಅವಕಾಶ ಮಾಡಿಕೊಟ್ಟಿದೆ.

ವಿದ್ಯಾರ್ಥಿಗಳ ಪರೀಕ್ಷೆಯು ಬೇರೆ ಶಾಲೆಗಳಲ್ಲಿ ಇರುವುದರಿಂದ, ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾ ದಿನಗಳಾದ 19 ಹಾಗೂ 22 ರಂದು ಅವರ ವಾಸಸ್ಥಳದಿಂದ ಶಾಲಾ/ಕಾಲೇಜುಗಳಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದ್ದು, ದಿನಾಂಕ:19-07-2021 ಮತ್ತು ದಿನಾಂಕ:22-07-2021 ರಂದು ಎಲ್ಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಪ್ರವೇಶ ಪತ್ರವನ್ನು ತೋರಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ 
+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು