ನಗರ-ಗ್ರಾಮೀಣ ಪ್ರದೇಶಗಳ ಕೆರೆ-ಕಟ್ಟೆಗಳ ಬೌಂಡರಿ ನಿಗದಿಪಡಿಸಿ ಸ್ವಾಮಿ

 

ವಿಜಯ ಸಂಘರ್ಷ


ಭದ್ರಾವತಿ: ನಗರಸಭಾ  ಹಾಗು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ-ಕಟ್ಟೆಗಳನ್ನು ಗುರುತಿಸಿ ಬೌಂಡರಿ ನಿಗದಿಪಡಿಸುವಂತೆ ಒತ್ತಾಯಿಸಿ  ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ತಹಸೀಲ್ದಾರ್ ಆರ್. ಪ್ರದೀಪ್‌ ರವರಿಗೆ ಮನವಿ ಸಲ್ಲಿಸಲಾಯಿತು.



ಈಗಾಗಲೇ ನಗರಸಭಾ ವ್ಯಾಪ್ತಿಯಲ್ಲಿ ಸುಮಾರು 70 ಕೆರೆಗಳು ಹಾಗು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 20 ಕೆರೆಗಳ ಬೌಂಡರಿ ನಿಗದಿಪಡಿಸುವ ಸಂಬಂಧ ಆದೇಶವಾಗಿರುತ್ತದೆ. ಕೆರೆ ಸಮೀಪದ ರೈತರು  ಸ್ವಇಚ್ಛೆಯಿಂದ ಸರ್ಕಾರದ ಯಾವುದೇ ಅನುದಾನ ವಿಲ್ಲದೆ ಕೆರೆಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತ, ನಗರಸಭೆ ಹಾಗು ಗ್ರಾಮ ಪಂಚಾಯಿತಿ ಆಡಳಿತಗಳಿಗೆ ಟ್ರಸ್ಟ್ ಹಾಗು ವೇದಿಕೆ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.



ತಾಂತ್ರಿಕ ಕಾರಣಗಳಿಂದಾಗಿ ತಾಲೂಕು ಆಡಳಿತದಿಂದ ನಗರಸಭೆ ಹಾಗು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಟ್ಟೆಗಳನ್ನು ಅಳತೆ ಮಾಡಿ ಬೌಂಡರಿ ನಿಗದಿಪಡಿಸಿರುವುದಿಲ್ಲ. ಈ ಹಿನ್ನಲೆ ಯಲ್ಲಿ ತಕ್ಷಣ ಕ್ರಮ ಕೈಗೊಂಡು ಕೆರೆಗಳಂತೆ ಕಟ್ಟೆಗಳನ್ನು ಅಭಿವೃದ್ಧಿ ಪಡಿಸಬೇಕು. ಇದರಿಂದಾಗಿ ಅಂತರ್ಜಲ ಹೆಚ್ಚುವ ಜೊತೆಗೆ ಪ್ರಾಣಿ, ಪಕ್ಷಿಗಳಿಗೆ, ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಲಾಗಿದೆ.

ಟ್ರಸ್ಟ್ ಛೇರ್‍ಮನ್ ಆರ್. ವೇಣು ಗೋಪಾಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷೆ ರಮಾ ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ದೇವಿಕಾ ನಾಗರಾಜ್, ಕಾರ್ಯದರ್ಶಿ ಶೈಲಜಾ ರಾಮಕೃಷ್ಣ ಮತ್ತಿತರರಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು