ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿದ ಕೈ ಮುಖಂಡರು

 


ವಿಜಯ ಸಂಘರ್ಷ

ಭದ್ರಾವತಿ : ನಗರದಲ್ಲಿ ಕೇಂದ್ರ ಸರಕಾರದ ಜನವಿರೋಧಿ ಅಗತ್ಯ ವಸ್ತುಗಳಾದ ಪೆಟ್ರೋಲ್ ಗ್ಯಾಸ್ ದಿನಸಿ ವಸ್ತುಗಳು ಬೆಲೆ ಏರಿಕೆಯನ್ನು ವಿರೋಧಿಸಿ ಶಾಸಕ ಬಿ.ಕೆ. ಸಂಗಮೇಶ್ವರ್ ರವರ ನೇತೃತ್ವದಲ್ಲಿ ಸೈಕಲ್ ಜಾಥಾ ಪ್ರತಿಭಟನೆ ನಡೆಸಲಾಯಿತು.



ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ 10 ವರ್ಷಗಳಲ್ಲಿ ತೈಲ ಬೆಲೆ 50 ರೂ. ದಾಟಿರಲಿಲ್ಲ. 380 ರೂ.ಗೆ ಅಡುಗೆ ಅನಿಲ ಲಭ್ಯವಾಗುತ್ತಿತ್ತು. ಬಡವರ ಸಂಕಷ್ಟಗಳಿಗೆ ಸ್ಪಂದಿಸಿದ ಕಾಂಗ್ರೇಸ್  ಸರ್ಕಾರ ಬೆಲೆ ಏರಿಕೆ ಮಾಡಿರಲಿಲ್ಲ. ಆದರೆ, ಕಳೆದ 7 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಶತಕ ಬಾರಿಸಿದೆ. 400 ರೂ. ಇದ್ದ ಅಡುಗೆ ಅನಿಲದ ಸಿಲಿಂಡರ್ ವೊಂದರ ಬೆಲೆ 900 ರೂ. ಆಗಿದೆ. ಈ ಮೂಲಕ ಕೇಂದ್ರ ಸರ್ಕಾರ ಬಡವರ ಮೇಲೆ ಗದಾಪ್ರಹಾರ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ  ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನಗರಸಭೆ ಸದಸ್ಯರು ಹಾಗೂ ಕಾಂಗ್ರೆಸ್  ಪಕ್ಷದ ಮುಖಂಡರು  ಭಾಗವಹಿಸಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ 
+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು