ವಿಜಯ ಸಂಘರ್ಷ
ಭದ್ರಾವತಿ: ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬಹುತೇಕ ಕೆರೆಕಟ್ಟೆಗಳು, ಹಳ್ಳಕೊಳ್ಳಗಳು ಭರ್ತಿಯಾಗಿದ್ದು, ಬೆಳೆ ಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಮುಂದಿನ 2-3 ದಿನ ಇದೆ ರೀತಿ ಮಳೆಯಾದಲ್ಲಿ ಜಮೀನು ಗಳಲ್ಲಿ ನೀರು ನಿಂತುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಇದರಿಂದ ಬೆಳೆ ಹಾನಿ ಯಾಗಲಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಉಳಿದಂತೆ ನಗರಸಭೆ ವ್ಯಾಪ್ತಿಯಲ್ಲಿ ಕಳೆದ 3 ದಿನಗಳಿಂದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ. ಕೆಲವೆಡೆ ಚರಂಡಿಗಳಲ್ಲಿ ಕಸಕಡ್ಡಿಕಟ್ಟಿ ಕೊಂಡು ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ಇದರಿಂದಾಗಿ ವಾಹನ ಸವಾರು ಹಾಗು ಪಾದಚಾರಿಗಳ ಸುಗಮ ಸಂಚಾರಕ್ಕೆ ತೊಂದರೆ ಯಾಗಿದೆ. ಇದುವರೆಗೂ ನಗರಸಭೆ ವ್ಯಾಪ್ತಿಯಲ್ಲಿ ಮಳೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಪೌರಾಯುಕ್ತ ಕೆ. ಪರಮೇಶ್ ತಿಳಿಸಿದ್ದಾರೆ.
ಸಹಾಯವಾಣಿ ಕೇಂದ್ರ:
ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ತಾಲೂಕು ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಹೆಲ್ಪ್ ಡೆಸ್ಕ್ ಸಹಾಯವಾಣಿ ಕೇಂದ್ರ ಆರಂಭಿಸಿದ್ದು, ದೂರವಾಣಿ ಸಂಖ್ಯೆ 08282-263466 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ತುರ್ತು ಸಂದರ್ಭಗಳಲ್ಲಿ ಸಮೀಪದ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ. ತಹಸೀಲ್ದಾರ್ ಮೊ: 9916201135 ತಹಸೀಲ್ದಾರ್ ಗ್ರೇಡ್-೨ ಮೊ:9663754181, ಶಿರಸ್ತೇದಾರ್ ಮೊ: 7892595465 ಉಪ ತಹಸೀಲ್ದಾರ್ ಕೂಡ್ಲಿಗೆರೆ ಮೊ: 9900800748, ಉಪ ತಹಸೀಲ್ದಾರ್ ಆನವೇರಿ ಮೊ: 9110642146 ಉಪ ತಹಸೀಲ್ದಾರ್ ಕಲ್ಲಿಹಾಳ್ ಮತ್ತು ಹೊಳೆಹೊನ್ನೂರು ಮೊ: 9449686474 ರಾಜಸ್ವ ನಿರೀಕ್ಷಕರು ಕಸಬಾ ಹೋಬಳಿ ಮೊ: 998055119 ರಾಜಸ್ವ ನಿರೀಕ್ಷಕರು ಕೂಡ್ಲಿಗೆರೆ ಹೋಬಳಿ ಮೊ: 7813043241 ರಾಜಸ್ವ ನಿರೀಕ್ಷಕರು ಹೊಳೆಹೊನ್ನೂರು ಹೋಬಳಿ ಮೊ: 9945575330 ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795