ಅವಧಿ ಪೂರೈಸಿದ ಜಿಲ್ಲೆಯ ಮೂವ್ವರು ಸಿಎಂಗಳು: ಹುಲಿಗಿ ಕೃಷ್ಣ

 


ವಿಜಯ ಸಂಘರ್ಷ

ಶಿಕಾರಿಪುರ: ಬಿಜೆಪಿ ಪಕ್ಷದ ವರಿಷ್ಠರು ಸಿಎಂ ಬಿ.ಎಸ್.ಯಡಿಯೂರಪ್ಪ ರವರನ್ನ ವಯೋಸಹಜ ನೆಪ ನೀಡಿ ಅಧಿಕಾರದಿಂದ ಕೆಳಗಿಳಿಸಲು ನಿರ್ಧಾರ ಕೈಗೊಂಡಿರುವುದರಿಂದ ರಾಜ್ಯದ ಅಭಿವೃದ್ದಿ ಕುಂಠಿತವಾಗಲಿದೆ ಎಂದು ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಲಗಿ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಪಟ್ಟಣದ ಸುದ್ದಿ ಮನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ದಿ:ಎಸ್ ಬಂಗಾರಪ್ಪ, ದಿ: ಜೆ.ಹೆಚ್. ಪಟೇಲ್, ಬಿ ಎಸ್ ಯಡಿಯೂರಪ್ಪ ಈ ಮೂರು ಜನ ಮುಖ್ಯಮಂತ್ರಿಗಳಾಗಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದು ಜಿಲ್ಲೆಯನ್ನು ವಿವಿಧ ರೀತಿಯಲ್ಲಿ ಅಭಿವೃದ್ಧಿ ಪಡಿಸಿದ್ದಾರೆ.

ಆದರೆ ಸಿಎಂ ಬಿ.ಎಸ್.ಯಡಿಯೂರಪ್ಪ ಪಕ್ಷಾತೀತವಾಗಿ ತಾಲ್ಲೂಕು ಸೇರಿದಂತೆ ಜಿಲ್ಲೆಯ ಹಾಗೂ ರಾಜ್ಯದ ಅಭಿವೃದ್ಧಿಗೆ ಮುಂದಾಗಿದ್ದಾರೆ. ಜಿಲ್ಲೆಯಿಂದ 3‌ ಜನ ಮುಖ್ಯಮಂತ್ರಿಗಳಾದರೂ ಐದು ವರ್ಷ ಅವಧಿಯನ್ನು ಪೂರೈಸದಿರುವುದೇ  ದುರ್ದೈವ.

ಬಿಎಸ್ ವೈ ಯಾವ ಪಕ್ಷದ ಅಥವಾ ಅಭ್ಯರ್ಥಿಗಳ ಪರವಾಗಿ ನಿಲ್ಲದೆ ತಾಲ್ಲೂಕು ಮತ್ತು ಜಿಲ್ಲೆಯ ಅಭಿವೃದ್ಧಿ ಯೋಜನೆ ಸೇರಿದಂತೆ ಅನೇಕ ಕೆಲಸ ಕಾರ್ಯಗಳನ್ನು ಗಮನಿಸಿ ಬಿ.ಎಸ್ ವೈ ರವರನ್ನ ಮುಂದುವರೆಸಲು ಸಂಘಟನೆಯಿಂದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಹಿಂದೊಮ್ಮೆ ಸಿಎಂ ಆಗಿದ್ದಾಗ ಶಿಕಾರಿಪುರ ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ವಿವಿಧ ಇಲಾಖೆಗಳ ಆಡಳಿತ ಮಂಡಳಿಯು ಒಂದೇ ಸೂರಿನಡಿ ಬರುವಂತೆ ಆಡಳಿತ ಸೌಧ, ಗ್ರಾಮೀಣ ಪ್ರದೇಶದ ಜನರಿಗೆ ಅನಾನುಕೂಲವಾಗುವಂತೆ ಸುಸಜ್ಜಿತ ವಾದ ತಾಲ್ಲೂಕು ಪಂಚಾಯಿತಿ ಕಟ್ಟಡದ ನಿರ್ಮಾಣ ಹೀಗೆ ಹಲವು ರೀತಿಯಲ್ಲಿ ಅಭಿವೃದ್ಧಿ ಯೋಜನೆ ಜಾರಿಗೆ ತಂದು ಅಭಿವೃದ್ಧಿ ಪಡಿಸಿದ್ದಾರೆ.

ಈಗ ನೀರಾವರಿ ಯೋಜನೆ,
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹೀಗೆ ಹತ್ತು ಹಲವು ಅಭಿವೃದ್ಧಿ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳ ಲಾಗಿದೆ ಒಂದು ವೇಳೆ ಅವರು ಅಧಿಕಾರದಿಂದ ಕೆಳಗಿಳಿ ದರೆ ತಾಲ್ಲೂಕು ಹಾಗೂ ಜಿಲ್ಲೆಯ ಹಲ ವಾರು ಅಭಿವೃದ್ಧಿ ಕಾರ್ಯಗಳಿಗೆ ತಡೆ ನೀಡಿದಂತಾಗುತ್ತದೆ ಎಂದರು.

ಕನ್ನಡ  ನುಡಿ ನೆಲ ಜಲ ಭಾಷೆ ಸಾಹಿತ್ಯ ಸಂಸ್ಕೃತಿಗೆ ಹೆಚ್ಚು  ಆದ್ಯತೆ ನೀಡಿರು ತ್ತಾರೆ. ಅದೇ ರೀತಿ ಮರಾಠ  ಅಭಿವೃದ್ಧಿ ಪ್ರಾಧಿಕಾರದ ವಿಚಾರ ಬಂದಾಗ ಸಂಘಟನೆಯಿಂದ ವಿರೋಧವ್ಯಕ್ತಪಡಿಸಿ ಹೋರಾಟ ನಡೆಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್ ಸಮಯದಲ್ಲಿ ಬಡ ಕುಟುಂಬಗಳಿಗೆ ನೆರವಾಗದಿರುವುದು ಬೇಸರದ ಸಂಗತಿಯಾಗಿತ್ತು. ಆದರೆ ಅಭಿವೃದ್ಧಿ ವಿಷಯದಲ್ಲಿ ಶ್ಲಾಘನೀಯವಾಗಿದೆ ಎಂದರು.

ಗೋಷ್ಠಿಯಲ್ಲಿ ಸಂಘಟನೆಯ ಗೌರವಾಧ್ಯಕ್ಷ ಹನುಮಂತಪ್ಪ, ತಾಲ್ಲೂಕು ಅಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಶಿವಯ್ಯ, ನಾಸಿರ್ ಅಹಮದ್, ಸಲಿಂ ಅಹಮದ್, ರಾಜುನಾಯ್ಕ, ತನ್ವಿರ್, ಸುಹೇಲ್ ಇದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು