ವಿಜಯ ಸಂಘರ್ಷ
ಶಿಕಾರಿಪುರ: ಪಟ್ಟಣದ ಕಾನೇರ ಕೇರಿಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದರು. ಈ ವೇಳೆ ಮನೆಯಲ್ಲಿದ್ದ ಸಿಎಂ ಪುತ್ರರಾದ ಸಂಸದ ಬಿ.ವೈ. ರಾಘವೇಂದ್ರ, ಬಿ.ವೈ. ವಿಜಯೇಂದ್ರ ಅವರು ತಮ್ಮ ಕುಟುಂಬ ಸಮೇತ ಶ್ರೀಗಳ ಪಾದಪೂಜೆ ನೆರವೇರಿಸಿದರು.
ಶ್ರೀಗಳು ನಂತರ ಕುಟುಂಬದವರಿಗೆ ಆಶೀರ್ವಾದ ಮಾಡಿದ್ದಾರೆ. ಯಡಿಯೂರಪ್ಪ ಕುಟುಂಬ ಮೊದಲಿನಿಂದಲೂ ಸಹ ರಂಭಾಪುರಿ ಮಠದ ಭಕ್ತರು. ಹಾಲಿ ರಾಜಕೀಯ ಏರುಪೇರಿನಲ್ಲಿ ರಂಭಾಪುರಿ ಶ್ರೀಗಳ ಭೇಟಿ ಹಲವು ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಶ್ರೀಗಳ ಭೇಟಿಯ ವೇಳೆ ಮಲೆನಾಡು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಜರಿದ್ದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ
+91 9743225795