ತಂಬಾಕು ಮಾರಾಟದ ಅಂಗಡಿಗಳ ಮೇಲೆ ರೈಡ್

 


ವಿಜಯ ಸಂಘರ್ಷ

ಭದ್ರಾವತಿ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಹಳೇನಗರ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 4050 ರು. ದಂಡ ವಸೂಲಾತಿ ಮಾಡಲಾಗಿದೆ.

ತಂಬಾಕು ನಿಯಂತ್ರಣ ಕೋಟ್ಪಾ ಕಾಯ್ದೆ 2003 ರ ಅಡಿಯಲ್ಲಿ ದಾಳಿ ನಡೆಸಿ ದಂಡ ವಸೂಲಾತಿ ಮಾಡುವ ಜೊತೆಗೆ ತಂಬಾಕು ಉತ್ಪನ್ನಗಳ ದುಷ್ಪರಿಣಾಮ ಗಳ ಕುರಿತುಜಾಗೃತಿಮೂಡಿಸಲಾಯಿತು.

 ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಟಿ ರಾಜೇಗೌಡ, ಹಿರಿಯ ಆರೋಗ್ಯ ಸಹಾಯಕ ಆನಂದಮೂರ್ತಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ರವಿರಾಜ್, ಪ್ರಾಥಮಿಕ ಆರೋಗ್ಯ ಕೇಂದ್ರದ ಹರೀಶ್, ಆಕಾಶ್ ಹಾಗು ಹಳೇನಗರ ಪೊಲೀಸ್ ಠಾಣೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ 
+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು