ವಿಜಯ ಸಂಘರ್ಷ
ಬೆಂಗಳೂರು: ಕೇವಲ 2 ದಿನ ಮಾತ್ರ ಎಸ್.ಎಸ್.ಎಲ್. ಸಿ ಪರೀಕ್ಷೆ ನಡೆದಿದ್ದು ಆ:10 ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವ ಸಾಧ್ಯತೆಯಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೇವಲ ಬಹು ಆಯ್ಕೆ ಮಾದರಿಯ ಉತ್ತರಗಳಲ್ಲಿ ಸರಿ ಉತ್ತರಗಳನ್ನು ಓಎಂಆರ್ ಶೀಟ್ ನಲ್ಲಿ ಗುರುತಿಸುವುದು ಮಾತ್ರ ಇದೆ ಜೊತೆಗೆ ಕೇವಲ 2 ಪರೀಕ್ಷೆಗಳನ್ನು ಮಾತ್ರ ಬರೆದರೆ ಆಯಿತು. ಹೀಗಾಗಿ ಮೌಲ್ಯಮಾಪನಕ್ಕೆ ಹೆಚ್ಚಿನ ಕಾಲಾವಕಾಶ ಬೇಕಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಆಗಸ್ಟ್ 10 ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795