ನನಗೆ ಅಧಿಕಾರದ ಆಸೆ ಇಲ್ಲ: ಜನತೆಯ ತೀರ್ಮಾನ ಕ್ಕೆ ಬಿಡುತ್ತೇನೆ: ಎಚ್ ಡಿ ಕೆ

 


ವಿಜಯ ಸಂಘರ್ಷ

ಬೆಂಗಳೂರು: ಆಷಾಡ ಮಾಸದ ನಂತರ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪಕ್ಷ ಸಂಘಟನೆಗಾಗಿ ಜಿಲ್ಲಾ ಪ್ರವಾಸ ಆರಂಭಿಸುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಗುರುವಾರ ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಂದಿನ ಒಂದು ವಾರದ ಕಾಲ ಪಕ್ಷದ ಕಚೇರಿಯಲ್ಲಿ ಜಿಲ್ಲಾವಾರು ಸಭೆ ಕರೆಯಲಾಗಿದೆ.
ಕೋವಿಡ್ ಹರಡುವಿಕೆ ಸಂಪೂರ್ಣ ಇನ್ನೂ ಮುಗಿದಿಲ್ಲ. ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಜಿಲ್ಲೆಗಳಿಗೆ ಹೋಗುವುದು ಸೂಕ್ತವಲ್ಲ.ಹೀಗಾಗಿ ಮುಂದಿನ ಬುಧವಾರದವರೆಗೂ ಸಭೆ ಕರೆದು ಸಂಘಟನೆ ಬಗ್ಗೆ ಚರ್ಚೆ ಮಾಡುತ್ತೇವೆ.

ಕೋವಿಡ್ ಅನಾಹುತ ನಿಂತ ಬಳಿಕ ಜಿಲ್ಲಾ ಪ್ರವಾಸ ಮಾಡುತ್ತೇನೆ.ಆಷಾಡ ಮಾಸದ ನಂತರ ಜಿಲ್ಲಾ ಪ್ರವಾಸ ಹಮ್ಮಿಕೊಳ್ಳುತ್ತೇನೆ.ತಾಲ್ಲೂಕು, ಜಿಲ್ಲಾ ಪಂಚಾಯತ್, ಮುಂದಿನ ವಿಧಾನಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಸಂಬಂಧ ಪದಾಧಿಕಾರಿಗಳ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷದ ಅವಶ್ಯಕತೆ ಬಗ್ಗೆ ತಿಳಿಸಲಾಗು ವುದು‌ ಎಂದರು.

ರಾಷ್ಟ್ರೀಯ ಪಕ್ಷ ನಡೆಸಬೇಕಾದರೆ ದೆಹಲಿಯಿಂದ ಇಲ್ಲಿಗೆ ಉಸ್ತುವಾರಿ ಕಳಿಸುತ್ತಾರೆ. ಬಿಜೆಪಿ, ಕಾಂಗ್ರೆಸ್‌‌ನಿಂದ ಉಸ್ತುವಾರಿ ಬರುತ್ತಾರೆ.ಅದರ ಉದ್ದೇಶ ಏನು? ಕರ್ನಾಟಕ ರಾಜ್ಯ ಸಂಪತ್ಭರಿತ ರಾಜ್ಯ. ಇಲ್ಲಿರುವ ಸಂಪತ್ತನ್ನು ಲೂಟಿ ಮಾಡಲು ಬರುತ್ತಾರೆ. ಪಾಳೆಯಗಾರಿಕೆ ನಡೆಸುವ ಕಥೆ ಇದು. ಇಲ್ಲಿರುವ ಸಂಪತ್ತನ್ನ ಚುನಾವಣೆ ನಡೆಸುವ ಸ್ಥಳಗಳಿಗೆ ಕಳಿಸುವುದು ಎಂದು ಹೆಚ್‌ಡಿಕೆ ಆರೋಪಿಸಿದರು.

ಕೋವಿಡ್, ಶಿಕ್ಷಣ, ಕೃಷಿ, ಯುವಕರಿಗೆ ಉದ್ಯೋಗ ಸೃಷ್ಟಿ ವಿಚಾರ ಬಗ್ಗೆ ಚರ್ಚೆ ಮಾಡುತ್ತೇವೆ. ನಾನು ಕೃಷಿಯಲ್ಲಿ ತೊಡಗಿಕೊಂಡರೂ ಸಹ ಪಕ್ಷ ಸಂಘ ಟನೆ ಮಾಡುವಲ್ಲಿ ತೊಡಗಿದ್ದೇನೆ. ಹೊಸದೊಂದು ಬದಲಾವಣೆಗೆ ಪ್ರಾದೇಶಿಕ ಪಕ್ಷದ ಪಾತ್ರದ ಬಗ್ಗೆ ಜನರಿಗೆ ತಿಳಿಸುತ್ತೇನೆ.
ಜಲ ಮಿಷನ್ ಯೋಜನೆ ಬಗ್ಗೆ ತಿಳಿಸಲು ಕೇಂದ್ರ ಸಚಿವರು ಇಲ್ಲಿಗೆ ಬಂದಿದ್ದರು.ಆದರೆ ಬೆಂಗಳೂರಿನಲ್ಲಿ ನಡೆಯುವ ಸಭೆಗೆ ಈಶ್ವರಪ್ಪ ಅವರು ಹೋಗುವುದೆ ಇಲ್ಲ.ಗುರಿ 99 ಲಕ್ಷ ಕುಟುಂಬಕ್ಕೆ ನೀರು ಪೂರೈಸುವ ಬಗ್ಗೆ ಹೇಳಿದ್ದರು.ಆದರೆ ಅವರು ನೀರಾವರಿ ವಿಚಾರವಾಗಿ ಚರ್ಚೆ ಮಾಡಲು ಬಂದಿಲ್ಲ.ಮಹದಾಯಿ, ಮೇಕೇದಾಟು ವಿಚಾರ ಸಮಗ್ರವಾಗಿ ಚರ್ಚೆ ನಡೆಸಿಲ್ಲ.ಸುಮ್ಮನೆ ಕೇಂದ್ರ ಜಲಸಂಪನ್ಮೂಲ ಸಚಿವರು ಬಂದು ಕರ್ನಾಟಕ‌ ಜನರಿಗೆ ಟೋಪಿ ಹಾಕಿದ್ದಾರೆ ಎಂದು ಆರೋಪಿಸಿದರು.
ಜನತೆ ಮುಂದೆ ಹಲವಾರು ರೀತಿಯ ಕಾರ್ಯಕ್ರಮ ರೂಪುರೇಷೆ ನಡೆಸಲು ನಿರ್ಧಾರ ಮಾಡಲಾಗಿದೆ.ಯಾವ ಸಂದರ್ಭದಲ್ಲಿ ಜನರ ಹತ್ತಿರ ಹೋಗಲು ಏನು ಮಾಡಬೇಕೋ ಅದನ್ನು ಮಾಡುತ್ತೇವೆ.ನಮ್ಮ ಪಕ್ಷ ಜನರಿಗಾಗಿಯೇ ಇರುವ ಪಕ್ಷ.
ಜನವರಿ 15ರ ಒಳಗೆ ಕನಿಷ್ಠ 150 ಜನ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ.ಈ ಬಾರಿ ಕರ್ನಾಟಕದಲ್ಲಿ ಯಾವುದೇ ಪಕ್ಷದ ಜೊತೆ ಮೈತ್ರಿಯಿಲ್ಲದೇ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದೇ ನನ್ನ ಗುರಿ.
ಕಾಂಗ್ರೆಸ್ ಪರಿಸ್ಥಿತಿ, ಬಿಜೆಪಿ ಅಧಿಕಾರ ಎಲ್ಲವನ್ನೂ ಜನತೆ ನೋಡಿದ್ದಾರೆ.
ಜನತಾದಳ ಅಧಿಕಾರದಲ್ಲಿದ್ದಾಗ ಮಾತ್ರ ಅಭಿವೃದ್ಧಿ ಆಗಿದೆ.2018ರಲ್ಲಿ ಸಿಎಂ ಆಗಿದ್ದಾಗ ಯಾವ ಯೋಜನೆಗೆ ಚಾಲನೆ ನೀಡಿದ್ದೆನೋ, ಅದನ್ನೇ ಈಗ ಮುಂದುವರೆಸುತ್ತಿದ್ದಾರೆ.ಭೂ ಸ್ವಾಧೀನ ಕ್ಲಿಯರೆನ್ಸ್ ಮಾಡಲು ಅನುಮತಿ ನೀಡಲಾಗಿತ್ತು.ಈವರೆಗೂ ಔಟರ್ ರಿಂಗ್ ರೋಡ್ ಪರಿಸ್ಥಿತಿ ಏನಾಗಿದೆ ಎಂದು ಪ್ರಶ್ನಿಸಿದರು.

ಎಲ್ಲಾ ಪಕ್ಷಗಳು ಅಧಿಕಾರಕ್ಕೆ ಬರುವುದಾಗಿ ಹೇಳುತ್ತಿದ್ದಾರೆ. ಯಡಿಯೂರಪ್ಪ ಅವರು ಹೇಳಿದ್ದರು.
ಸಿದ್ದರಾಮಯ್ಯ ಕಳೆದ ಬಾರಿ ಇದು ಒಂದು ತಮ್ಮ ಕೊನೆ ಬಾರಿ ಚುನಾವಣೆ ಅಂದು ಈಗ ಅವರು ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಅವರು ದುಡಿಮೆಗಿಂತ, ನಾನೇ ಸಿಎಂ ಅಂತ ಹೇಳಿಕೊಂಡು ಒಬ್ಬೊಬ್ಬರ ಹೆಸರು ಸೇರಿಸುತ್ತಾ ಬಂದಿದ್ದಾರೆ.

ದೇಶಕ್ಕೆ ಮಾದರಿಯಾಗುವ ಕೆಲಸ ಮಾಡಬೇಕು.ನನಗೆ ಅಧಿಕಾರದ ಆಸೆ ಇಲ್ಲ.ಎಲ್ಲವನ್ನು ಜನತೆಯ ತೀರ್ಮಾನಕ್ಕೆ ಬಿಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು