ವಿಜಯ ಸಂಘರ್ಷ
ಭದ್ರಾವತಿ:ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರ ಬಿಳಿಕಿ ಶಾಖಾ ಮಠದ ಶ್ರೀ ರಾಚೋಟೇಶ್ವರಿ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಒತ್ತಾಯಿಸಿದ್ದಾರೆ.
ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾದ ಬಳಿಕ ಯಡಿಯೂರಪ್ಪ ಸಿಎಂ ಆಗಿ ಉತ್ತಮ ವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಪೂರ್ಣಾವಧಿ ಸಿಎಂ ಆಗಿರಬೇಕೆಂಬುದು ಎಲ್ಲ ಮಠಾಧೀಶರ ಆಶಯವಾಗಿದೆ.
ನಮ್ಮ ಇಚ್ಚೆ ಏನೆಂದರೆ ಅವಧಿ ಪೂರೈಸುವವರೆಗೆ ಯಡಿಯೂರಪ್ಪ ಮುಂದುವರೆಸಬೇಕೆಂಬುದಷ್ಟೇ ನಮ್ಮ ಆಶಯ ಎಂದು ಸ್ವಾಮೀಜಿಗಳು ಒಕ್ಕೂರಿಲಿನಿಂದ ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರೆ ಪೂರ್ಣಾವಧಿ ಮುಖ್ಯಮಂತ್ರಿಗಳಾಗಿರಬೇಕೆಂದು ಮಠಾಧೀಶರ ಸಮ್ಮುಖದಲ್ಲಿ ಬೆಂಬಲಿಸಲಾಗಿತ್ತು.