ವಿಜಯ ಸಂಘರ್ಷ
ಶಿವಮೊಗ್ಗ : ಭಾರಿ ಮಳೆಯಾಗುತ್ತಿ ರುವುದರಿಂದ ತುಂಗಾ ಜಲಾಶಯದಿಂದ ಗಂಟೆ ಗಂಟೆಗೂ ಹೆಚ್ಚು ನೀರನ್ನು ಹೊರಗೆ ಬಿಡಲಾಗುತ್ತಿದೆ.
ರಾತ್ರಿ 10 ಗಂಟೆಯಿಂದ ತುಂಗಾ ಡ್ಯಾಂನಿಂದ 56,500 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಆದರೆ ಮಳೆ ಹೆಚ್ಚಳವಾದ ಹಿನ್ನೆಲೆ ಹೊರ ಹರಿವು ಪ್ರಮಾಣ ಏರಿಕೆಯಾಗಲಿದೆ.
ತಡರಾತ್ರಿ 12 ಗಂಟೆಗೆ 61,500 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊಳೆಗೆ ಬಿಡಲು ತೀರ್ಮಾನಿಸಲಾಗಿದೆ. ಇಂದು ಬೆಳಗ್ಗೆಯಿಂದ 41 ಸಾವಿರ ಕ್ಯೂಸೆಕ್ ಹೊರಹರಿವು ಇತ್ತು. ಮಳೆ ಹೆಚ್ಚಾದ ಹಿನ್ನೆಲೆ ಸಂಜೆಯಿಂದ ಹೊರಹರಿವು ಪ್ರಮಾಣ 50 ಸಾವಿರ ಕ್ಯೂಸೆಕ್ಗೆ ಹೆಚ್ಚಳವಾಯಿತು.
ಭಾರಿ ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡುತ್ತಿರುವುದರಿಂದ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಮುಳುಗಡೆಯಾಗಿದೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795