ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ ಚಂದ್‌ ಗೆಹ್ಲೋಟ್‌

 


ವಿಜಯ ಸಂಘರ್ಷ

ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ತಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇಮಕ ಗೊಳಿಸಿ ಆದೇಶ ಹೊರಡಿಸಿದ್ದಾರೆ.
ಹಾಲಿ ರಾಜ್ಯಪಾಲ ವಜುಭಾಯ್‌ ವಾಲಾ ಅವರ ಅವಧಿ ಪೂರ್ಣ ಗೊಂಡಿರುವ ಹಿನ್ನಲೆಯಲ್ಲಿ ಅವರ ಸ್ಥಾನಕ್ಕೆ ಗೆಹ್ಲೋಟ್‌ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸಂಪುಟ ಪುನರ್‌ ರಚನೆಯ ವೇಳೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರಾಗಿರುವ ಗೆಹ್ಲೋಟ್‌ ಅವರನ್ನು ಕೈಬಿಡಲಿರುವ ಕಾರಣ ರಾಜ್ಯಪಾಲರ ಹುದ್ದೆಗೆ ನೇಮಕ ಮಾಡಲಾಗಿದೆ.
ಮೂರು ಬಾರಿ ಮಧ್ಯಪ್ರದೇಶ ವಿಧಾನಸಭೆಯ ಸದಸ್ಯರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿದ್ದ ಗೆಹ್ಲೋಟ್‌ ಪ್ರಸ್ತುತ ರಾಜ್ಯ ಸಭೆಯಲ್ಲಿ ಆಡಳಿತ ಪಕ್ಷದ ನಾಯಕರಾಗಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ 
+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು