ವಿಜಯ ಸಂಘರ್ಷ
ಬೆಂಗಳೂರು: ಕರ್ನಾಟಕ ರಾಜ್ಯದ ನೂತನ 30 ನೇ ಮುಖ್ಯಮಂತ್ರಿ ಯಾಗಿ ಬಸವರಾಜ ಬೊಮ್ಮಾಯಿ ರಾಜಭವನದ ಗಾಜಿನ ಮನೆಯಲ್ಲಿಂದು ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು.
ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಕಾರ್ಯಕ್ರಮ ನಡೆಸಿಕೊಟ್ಟರು.ಬಳಿಕ ನೂತನ ಮುಖ್ಯಮಂತ್ರಿ ಕಡತಕ್ಕೆ ಸಹಿ ಹಾಕಿದರು. ನಂತರ ರಾಜ್ಯಪಾಲ ಟಿ.ಸಿ. ಗೆಹ್ಲೋಟ್, ಸಿಎಂ ಬೊಮ್ಮಾಯಿ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.
ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಬೊಮ್ಮಾಯಿ, ಹಂಗಾಮಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು.ಅದಕ್ಕೂ ಮುನ್ನ ಅರಮನೆ ರಸ್ತೆಯ ಆಂಜನೇಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಬಗ್ಗೆ ಇಂದು ಚರ್ಚೆ ನಡೆಯಲಿದೆ. ಪ್ರಮಾಣವಚನ ಸಮಾರಂಭದ ಬಳಿಕ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಆ ಬಳಿಕ ಅಧಿಕಾರಿಗಳ ಸಭೆ ನಡೆಸಿ ರಾಜ್ಯದಲ್ಲಿ ಕೋವಿಡ್ ಹಾಗೂ ಪ್ರವಾಹ ಪರಿಸ್ಥಿತಿಯ ಅವಲೋಕನ ನಡೆಸಲಾಗುವುದು. ಜತೆಗೆ ಪ್ರವಾಹಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸುವುದಾಗಿ ಹೇಳಿದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795