ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 350 ಆರಾಧನಾ ಮಹೋತ್ಸವ

 

ವಿಜಯ ಸಂಘರ್ಷ



ಭದ್ರಾವತಿ : ಹಳೇನಗರ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ 350ಆರಾಧನಾ ಮಹೋತ್ಸವದ 3 ದಿನಗಳ ಕಾಲ ಅದ್ದೂರಿಯಾಗಿ ನಡೆಯಿತು.

 ಬುಧವಾರ ಬೆಳಗ್ಗೆ ರಾಯರ ಬೃಂದಾವನಕ್ಕೆ ಹಾಲಿನ ಅಭಿಷೇಕ, ಹೂವಿನ ಅಲಂಕಾರ ಮತ್ತು ಪ್ರಾಕಾರದಲ್ಲಿ ರಾಜಬೀದಿ ಉತ್ಸವ ನಡೆಯಿತು. ಮಧ್ಯಾಹ್ನ 12 ಗಂಟೆಗೆ ತೀರ್ಥಪ್ರಸಾದ ವಿನಿಯೋಗ, ಮಹಾಮಂಗಳಾರತಿ, ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು.

 ಸಂಜೆ ಹರಿಪ್ರಿಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಮತ್ತು ಶ್ರೀಕೃಷ್ಣ ಚಂಡೆ ಬಳಗದಿಂದ ಉತ್ಸವ ಹಾಗೂ ಕರಾವಳಿ ವಿಪ್ರ ಬಳಗದಿಂದ ನೃತ್ಯ ಕಾರ್ಯಕ್ರಮ ನಡೆಯಿತು.

 ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳೀಧರ ತಂತ್ರಿ, ಉಪಾಧ್ಯಕ್ಷೆ ಸುಮಾ ರಾಘವೇಂದ್ರ,  ಪ್ರಧಾನ ಕಾರ್ಯದರ್ಶಿ ರಮಾಕಾಂತ್, ನಿರಂಜನ ಆಚಾರ್,  ಪವನ್‌ಕುಮಾರ್ ಉಡುಪ, ಪ್ರಮೋದ್ ಹಾಗೂ ಪ್ರಧಾನ ಅರ್ಚಕ ಸತ್ಯನಾರಾಯಣ, ಗೋಪಾಲಚಾರಿ, ಶ್ರೀನಿವಾಸ, ಸಹಾಯಕ ಅರ್ಚಕ ಮಾಧುರಾವ್, ಶ್ರೀಪತಿ, ಮಧು ಇನ್ನಿತರರು ಉಪಸ್ಥಿತರಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು