ವಿಜಯ ಸಂಘರ್ಷ
ಬೆಂಗಳೂರು : ಆಗಸ್ಟ್ 9ರ ಸೋಮವಾರ ಅಂದರೆ ನಾಳೆ. ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟಿಸುವುದಾಗಿ ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಸೋಮವಾರ (ನಾಳೆ )ಸಂಜೆ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಿಗದಿಪಡಿಸಲಾಗಿದೆ. ಅಲ್ಲಿ ಫಲಿತಾಂಶ (SSLC Results 2021) ಪ್ರಕಟಣೆಯಾಗಲಿದೆ.
ಕೊರೊನಾ ಹಿನ್ನೆಲೆಯಲ್ಲಿ ಜೂನ್ 19, ಜೂನ್ 22ರಂದು 2 ದಿನ ಮಾತ್ರ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು. ಎಸ್ಎಸ್ಎಲ್ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು.
ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್‌ಎಸ್‌ಎಲ್ ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ
1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ sslc.karnataka.gov.in ಕ್ಲಿಕ್ ಮಾಡಿ
2. ಸ್ಕ್ರೀನ್ನಲ್ಲಿ ರಿಸಲ್ಟ್ ಲಿಂಕ್ ಕಾಣಿಸಿಕೊಳ್ಳುತ್ತದೆ.
ಆ ಲಿಂಕ್ ಅನ್ನು ಕ್ಲಿಕ್ ಮಾಡಿ
3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ
4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ
5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ
6. ತಾತ್ಕಾಲಿಕ ಅಂಕಪಟ್ಟಿ ಆನ್ಲೈನ್ನಲ್ಲೇ ಲಭ್ಯವಾಗಲಿದ್ದು, ಅಲ್ಲಿಂದಲೇ ಡೌನ್ಲೋಡ್ ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ.
ಮರುಮೌಲ್ಯಮಾಪನಕ್ಕೆ ಅವಕಾಶ ವಿದೆಯೇ.?
ಫಲಿತಾಂಶದ ಬಗ್ಗೆ ಅಸಮಾ ಧಾನವಿದ್ದಲ್ಲಿ ವಿದ್ಯಾರ್ಥಿ ಗಳು ಮರುಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು.
ಈ ವೆಬ್ಸೈಟ್ಗಳಲ್ಲಿ ಫಲಿತಾಂಶ ವೀಕ್ಷಿಸಿ
sslc.karnataka.gov.in
kseeb.kar.nic.in
karresults.nic.in
ಕರ್ನಾಟಕದಲ್ಲಿ 12 ಲಕ್ಷ ಪಿಯುಸಿ ಸೀಟ್ಗಳು ಲಭ್ಯವಿದೆ. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ತೇರ್ಗಡೆ ಹೊಂದಲಿದ್ದು, ಎಲ್ಲ ವಿದ್ಯಾರ್ಥಿ ಗಳಿಗೂ ಮುಂದಿನ ವರ್ಷಕ್ಕೆ ಪಿಯುಸಿಗೆ ಸೀಟ್ಗಳು ಸಿಗಲಿವೆ. ರಾಜ್ಯದಲ್ಲಿ ಈ ವರ್ಷ 8,19,694 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ಈಗಾಗಲೇ ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಿದೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795