ಪಜಾ/ ಪಪಂ ವಿದ್ಯಾರ್ಥಿ ಗಳಿಗೆ ಕೂಡಲೇ ಹಣ ಬಿಡುಗಡೆ ಗೊಳಿಸಿ

 

ವಿಜಯ ಸಂಘರ್ಷ



ಶಿವಮೊಗ್ಗ : ಎಸ್ ಸಿ /ಎಸ್ ಟಿ  ವಿದ್ಯಾರ್ಥಿಗಳಿಗೆ ಧನಸಹಾಯ ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಎನ್ ಎಸ್‌ಯು ಐ ಸಂಘಟನೆ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಉತ್ತಮ ಫಲಿತಾಂಶ ಪಡೆದು ಪಾಸಾದ ಪಿ.ಯು.ಸಿ., ಪದವಿ ಮತ್ತು ಸ್ನಾತಕ ಪದವಿ, ವೈದ್ಯಕೀಯ, ತಾಂತ್ರಿಕ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಫ್ರೈಜ್‍ಮನಿ ಹಣವನ್ನು ಜಿಲ್ಲೆಯಲ್ಲಿ ತಡೆಹಿಡಿದಿದ್ದು, ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದೆ.

ಜಿಲ್ಲೆಯಲ್ಲಿ 2019-20 ನೇ ಸಾಲಿನಲ್ಲಿ ಫ್ರೈಜ್‍ಮನಿ ಯೋಜನೆಯಡಿ ಜಿಲ್ಲೆಯಲ್ಲಿ 1600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆದರೆ, ಇಲಾಖೆ ಶೇ. 50ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಧನಸಹಾಯದ ಹಣ ಬಿಡುಗಡೆ ಮಾಡಿದೆ.ಉಳಿದ ವಿದ್ಯಾರ್ಥಿಗಳಿಗೆ ಈವರೆಗೂ ಹಣ ಬಿಡುಗಡೆ ಮಾಡಿರುವುದಿಲ್ಲ.

ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಅನುದಾನ ಬಿಡುಗಡೆ ಮಾಡಿದ್ದರೂ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳಿಗೆ ಹಣ ಬಿಡುಗಡೆ ಮಾಡದೇ ಮೀನಾಮೇಷ ಎಣಿಸುತ್ತಿದೆ.

ಫ್ರೈಜ್ ಮನಿ ಯೋಜನೆಯಡಿ ಪಿಯುಸಿ ವಿದ್ಯಾರ್ಥಿಗಳಿಗೆ 20 ಸಾವಿರ, ಪದವಿ ವಿದ್ಯಾರ್ಥಿಗಳಿಗೆ 25 ಸಾವಿರ, ಸ್ನಾತಕೋತ್ತರ ಕೋರ್ಸ್‍ಗಳಿಗೆ 30 ಸಾವಿರ, ಇಂಜಿನಿಯರಿಂಗ್ ಹಾಗೂ ಮೆಡಿಕಲ್ ವಿದ್ಯಾರ್ಥಿಗಳಿಗೆ 35 ಸಾವಿರ ರೂ.ಗಳನ್ನು ಬಿಡುಗಡೆ ಮಾಡಬೇಕು.

ಕೋವಿಡ್‍ನಂತಹ ಸಂಕಷ್ಟದ ಸಂದರ್ಭದಲ್ಲಿ ಹಣವನ್ನು ಬಿಡುಗಡೆ ಮಾಡಿದರೆ, ಈ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ.

ಆದ್ದರಿಂದ ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಇನ್ನೆರಡು ದಿನಗಳಲ್ಲಿ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸುತ್ತಿದ್ದೇವೆ. ಇಲ್ಲವಾದಲ್ಲಿ ಎನ್.ಎಸ್.ಯು.ಐ. ವತಿಯಿಂದ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ಎನ್.ಎಸ್.ಯು.ಐ ನಗರಾಧ್ಯಕ್ಷ ವಿಜಯ್ , ಬಾಲಾಜಿ ಜಿಲ್ಲಾಧ್ಯಕ್ಷ
ರವಿ, ಕಾರ್ಯಾಧ್ಯಕ್ಷ , ಅಬ್ದುಲ್ಲಾ ,ರವಿ, ಆಲ್ವಿನ್, ಕಿರಣ್, ಚಂದ್ರೋಜಿ ರಾವ್ ,ಆಕಾಶ್, ಮಂಜು, ಸಂದೀಪ, ಸಂದೇಶ, ಪ್ರಸನ್ನ ,ವಿಕ್ರಂ, ಅಶ್ವಲ್, ಗಿರೀಶ್ ಉಪಸ್ಥಿತರಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು