ವಿಜಯ ಸಂಘರ್ಷ
ಕೆ ಆರ್. ಪೇಟೆ : ತಾಲೂಕಿನ ಮಂದಗೆರೆ ಹೇಮಾವತಿ ನದಿಯ ಎಡದಂಡೆ ನಾಲೆಯ ಊಳೆತ್ತುವಲ್ಲಿ ಅಧಿಕಾರಿಗಳ ಕುಮ್ಮಕ್ಕಿನಿಂದ ಕಳಪೆ ಕಾಮಗಾರಿ ನಡೆಸಿದ್ದಾರೆ ಎಂದು ಕರ್ನಾಟಕ ರಕ್ಷಣಾ ಸೇನೆ ಕಾರ್ಯಕರ್ತರು ಆರೋಪಿಸಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಕಾರ್ಯಪಾಲಕ ಇಂಜಿನಿಯರ್ ಕಛೇರಿ ಮುಂಭಾಗ ಜಮಾಯಿಸಿದ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ನೀರಾವರಿ ಇಲಾಖೆಯ ಭ್ರಷ್ಟ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ, ಅವರಿಂದ ಕಮಿಷನ್ ಪಡೆದು ಕಳಪೆ ಕಾಮಗಾರಿ ಮಾಡುವಲ್ಲಿ ಕುಮ್ಮಕ್ಕು ನೀಡಿ, ತಾಲೂಕಿನ ರೈತರಿಗೆ ಮೋಸ ಮಾಡುತ್ತಿದ್ದಾರೆ, ಕೂಡಲೇ ಸ್ಥಳೀಯ ಶಾಸಕ ಕೆ.ಸಿ.ನಾರಾಯಣ ಗೌಡ ಗಮನಹರಿಸಿ ಸರ್ಕಾರಿ ಹಣವನ್ನು ದುರುಪಯೋಗ ಮಾಡುವ ಅಧಿಕಾರಿಗಳ ವಿರುದ್ಧ ಸೂಕ್ತಕ್ರಮ ಕೈಗೊಳ್ಳಬೇಕು ಒತ್ತಾಯಿಸಿದರು.
ತಾಲೂಕು ಅಧ್ಯಕ್ಷ ಪ್ರಶಾಂತ್ ಗೌಡ ಅವರ ನೇತೃತ್ವ ವಹಿಸಿದ್ದರು. ರಕ್ಷಣಾ ಸೇನೆಯ ಕಾರ್ಯದರ್ಶಿ ಶಿವಕುಮಾರ್, ಸಂಘಟನಾ ಕಾರ್ಯದರ್ಶಿ ವಿನೋದ್, ಯುವ ಘಟಕದ ಅಧ್ಯಕ್ಷ ಹೇಮಂತ್ ಗೌಡ, ಪುನೀತ್ ಪಿ. ಗೌಡ, ಅರವಿಂದ್, ಕೀರ್ತಿ ಎಂ.ಜೆ.ಚೇತನ್ ಗೌಡ, ಆಕಾಶ್, ಬಾಲುಗೌಡ, ಶಶಾಂಕ್ ಮತ್ತಿತರರು ಪಾಲ್ಗೊಂಡಿದ್ದರು.
ವರದಿ : ಸಿ.ಆರ್. ಜಗದೀಶ್, ಕೆ.ಆರ್ ಪೇಟೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795