ವಿಜಯ ಸಂಘರ್ಷ
ಭದ್ರಾವತಿ: ನಾನಾ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಪೌರಾಯುಕ್ತ ಕೆ. ಪರಮೇಶ್ ರವರಿಗೆ ಮನವಿ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿಗಳ ವಿಶೇಷ ಅನುದಾನ ದಲ್ಲಿ 1 ಕೋ. ರು. ವೆಚ್ಚದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಬಡವರಿಗೆ ನ್ಯಾಯಬೆಲೆ ಅಂಗಡಿ ಮೂಲಕ ಉಚಿತ ದಿನಸಿ ಸಾಮಗ್ರಿ ವಿತರಿಸಲಾಗುತ್ತಿದ್ದು, ಇದುವರೆಗೂ ಶೇ.40 ರಷ್ಟು ಮಾತ್ರ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗಿದೆ. ಉಳಿದ ಶೇ.60 ರಷ್ಟು ಆಹಾರ ಸಾಮಗ್ರಿಗಳನ್ನು ತಕ್ಷಣ ವಿತರಿಸುವಂತೆ ಒತ್ತಾಯಿಸಿದ್ದಾರೆ.
ವಾರ್ಡ್ ನಂ. 32 ರ ಫಿಲ್ಟರ್ಶೆಡ್ನಲ್ಲಿ ಚರಂಡಿ, ರಸ್ತೆ ಸೇರಿದಂತೆ ಮೂಲ ಸೌಕರ್ಯಗಳ ಕೊರತೆಯಿದ್ದು ತಕ್ಷಣ ಕ್ರಮ ಕೈಗೊಳ್ಳುವಂತೆ ಹಾಗು ಇದೆ ವಾರ್ಡ್ನಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ ನೂರಾರು ಮಂದಿ ಬರುತ್ತಿದ್ದು, ಆರೋಗ್ಯ ಕೇಂದ್ರದ ಮುಂಭಾಗ ಮಳೆ, ಬಿಸಿಲಿನಿಂದ ರಕ್ಷಣೆ ಪಡೆಯಲು ಮತ್ತು ಕುಳಿತುಕೊಳ್ಳಲು ಯಾವುದೇ ಸೌಲರ್ಭ್ಯಗಳು ಇಲ್ಲದ ಕಾರ ಣ ತೊಂದರೆ ಅನುಭವಿಸುವಂತಾಗಿದೆ.
ಈ ಹಿನ್ನಲೆಯಲ್ಲಿ ಮೇಲ್ಛಾವಣಿ ವ್ಯವಸ್ಥೆ ಮತ್ತು ಕುಳಿತು ಕೊಳ್ಳಲು ಆಸನಗಳ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಆಗ್ರಹಿಸಿದ್ದಾರೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795