ವಿಜಯ ಸಂಘರ್ಷ
ಬೆಳಗಾವಿ: ಮಹಾನಗರ ಪಾಲಿಕೆಯ ಚುನಾವಣಾ ಅಖಾಡ ದಿನೇ ದಿನೇ ರಂಗೇರುತ್ತಿದೆ. ಅದರಲ್ಲೂ ಪಾಲಿಕೆ ಚುನಾವಣೆ ಹಲವಾರು ವಿಷಯಗಳಿಗೆ ಈ ಬಾರಿ ಸಾಕ್ಷಿಯಾಗಲಿದೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಚುನಾವಣೆಗೆ ತಯಾರಿ ನಡೆಸಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಸ್ವತಃ ಪ್ರಚಾರ ಕಣಕ್ಕೆ ಧುಮುಕಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಪಕ್ಷದ ಪರ ಅಬ್ಬರದ ಪ್ರಚಾರ ನಡೆಸಿದರು.
ರಾಜ್ಯದ ಪ್ರಮುಖ ನಾಯಕರೆಲ್ಲರೂ ಪ್ರಚಾರ ಕಣಕ್ಕೆ ಬರುತ್ತಾರೆ ಎಂದು ತಿಳಿಸಿರುವ ಶಾಸಕಿ, ಈ ಬಾರಿ ಪಾಲಿಕೆ ಗದ್ದುಗೆಯನ್ನೇರಲು ಕಾಂಗ್ರೆಸ್ ಪಕ್ಷ ರೂಪರೇಷೆಗಳನ್ನು ಹಾಕಿಕೊಂಡಿದೆ ಎಂದರು.
ಈಗಾಗಲೇ ಕುಂದಾನಗರಿಯ ಜನರು ಎಂಇಎಸ್ ಮತ್ತು ಬಿಜೆಪಿಗೆ ಅವಕಾಶ ಕೊಟ್ಟಿದ್ದೀರಿ. ಹೀಗಾಗಿ ಈ ಬಾರಿ ಒಮ್ಮೆ ಕಾಂಗ್ರೆಸ್ ಕೈಗೆ ಮೇಯರ್ ಗಿರಿ ಕೊಟ್ಟು ನೋಡಿ ಎಂದು ಮನವಿ ಮಾಡಿದರು.
ಬೆಳಗಾವಿ ನಗರದಲ್ಲಿ ಅಭಿವೃದ್ಧಿಯ ನವಯುಗ ಪ್ರಾರಂಭವಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಬಂದು ಅಭ್ಯರ್ಥಿಗಳನ್ನು ಹುರಿದುಂಬಿಸಲಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795