ವಿಜಯ ಸಂಘರ್ಷ
ಭದ್ರಾವತಿ: ತಾಲೂಕು ಆಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಇಂದು ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಮಾಜಿ ಮುಖ್ಯ ಮಂತ್ರಿ ದೇವರಾಜ ಅರಸುರವರ 106 ಜಯಂತಿ ಆಚರಿಸಲಾಯಿತು.
ಶಾಸಕ ಬಿ.ಕೆ.ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಿ, ಹಿಂದುಳಿದ ವರ್ಗಗಳ ಹರಿಕಾರ ದಿ: ದೇವರಾಜ ಅರಸುರವರ ಸಾಧನೆಗಳನ್ನು ಕುರಿತು ಮಾತನಾಡಿದರು.
ತಹಸೀಲ್ದಾರ್ ಪ್ರದೀಪ್ ಅಧ್ಯಕ್ಷತೆ ವಹಿಸಿದ್ದರು. ಗ್ರೇಡ್-2 ತಹಸೀಲ್ದಾರ್ ರಂಗಮ್ಮ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಶ್ವರಿ, ಮೇಲ್ವಿಚಾರಕ ರಮೇಶ್, ಕಂದಾಯಾಧಿಕಾರಿ ಪ್ರಶಾಂತ್, ಮುಖಂಡ ಟಿ.ವೆಂಕಟೇಶ್, ಮುಂತಾದವರು ಉಪಸ್ಥಿತರಿದ್ದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795