ವಿಜಯ ಸಂಘರ್ಷ
ಭದ್ರಾವತಿ : ಮಾಜಿ ಪ್ರಧಾನಿ ದಿ: ರಾಜೀವ್ ಗಾಂಧಿಯವರು ರಾಷ್ಟ್ರೀಯ
ಏಕತಾ ಮತ್ತು ಸಮಗ್ರತೆಗೆ ವಿಶೇಷ ಒತ್ತುನೀಡಿ ಮಾದರಿ ಆಡಳಿತ ನೀಡಿದ್ದರಲ್ಲದೆ ಡಿಜಿಟಲ್ ತಂತ್ರಜ್ಞಾನದತ್ತ ಯುವಕರನ್ನು ಆಕರ್ಷಿಸುವಲ್ಲಿ ಕಾರಣಕರ್ತರಾಗಿದ್ದರು ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ.ಧನಂಜಯ ಹೇಳಿದರು.
ಸದ್ಭಾವನಾ ದಿನದ ಅಂಗವಾಗಿ ನಗರದ ಹೊಸಮನೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
ಅಲ್ಪ ಕಾಲದಲ್ಲಿ ಎಲ್ಲಾ ನಾಯಕರನ್ನು ಆಕರ್ಷಿಸಿ ದೇಶಕ್ಕೆ ತಾಂತ್ರಿಕ ಸ್ಪರ್ಶನೀಡಿ ಅಪರೂಪದ ರಾಜಕೀಯ ಮುತ್ಸದ್ದಿ ಯಾಗಿದ್ದರು. ವೈಜ್ಞಾನಿಕ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ಆತ್ಮವಿಶ್ವಾಸ ಮತ್ತು ಭರವಸೆಯ ಕನಸ ಬಿತ್ತಿದ್ದರು ಅಂತಹ ಮಹಾನ್ ಪುರುಷರ ಆದರ್ಶ ಮತ್ತು ಆಶಯ ಪಾಲಿಸುವುದು ಎಲ್ಲರ ಕರ್ತವ್ಯ ವಾಗಿದೆ ಎಂದರು.
ಕೆ.ಬಿ.ರೇವಣಸಿದ್ದಪ್ಪ, ಡಾ.ತಿಪ್ಪೇಶ್ ಸೇರಿದಂತೆ ವಿದ್ಯಾರ್ಥಿಗಳಿದ್ದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795