ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನಲೆ ಮಾಂಸ ಮಾರಾಟ ನಿಷೇಧ

 

ವಿಜಯ ಸಂಘರ್ಷ



ಭದ್ರಾವತಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನಲೆಯಲ್ಲಿ ನಗರಸಭಾ ವ್ಯಾಪ್ತಿಯಲ್ಲಿ ಆ.30 ರಂದು ಸೋಮವಾರ ಪ್ರಾಣಿವಧೆ, ಮಾಂಸ ಮಾರಾಟ ಹಾಗು ಮಾಂಸಹಾರ ತಯಾರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕುರಿ, ಕೋಳಿ ಮತ್ತು ಇತರೆ ಮಾಂಸ ಮಾರಾಟಗಾರರು ಮಾರಾಟ ಮಾಡುವುದನ್ನು ಹಾಗು ಬಾರ್ ಮತ್ತು  ರೆಸ್ಟೋರೆಂಟ್ ಮತ್ತು ಮಾಂಸಹಾರಿ ಹೋಟೆಲ್‌ಗಳಲ್ಲಿ ಮಾಂಸಹಾರ ತಯಾರಿಸುವುದನ್ನು ಸಹ ನಿಷೇಧಿಸಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ನಗರಸಭೆ ಪೌರಾಯುಕ್ತರು ಎಚ್ಚರಿಸಿದ್ದಾರೆ.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು