ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ

 

ವಿಜಯ ಸಂಘರ್ಷ



ಶಿವಮೊಗ್ಗ: ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಕೂಡಲೇ ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ಮಾದಿಗ ದಂಡೋರ ಹೋರಾಟ ಸಮಿತಿ  ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ರಾಜೀವ್ ಚಂದ್ರಶೇಖರ್ ರವರಿಗೆ ಇಂದು ಮನವಿ ಸಲ್ಲಿಸಲಾಯಿತು.

ಕಳೆದ 25 ವರ್ಷಗಳಿಂದ ಮಾದಿಗ ಮತ್ತು ಸಂಬಂಧಿತ ಸಮುದಾಯಗಳಿಗೆ ಜನ ಸಂಖ್ಯಾ ಆಧಾರದ ಮೇಲೆ ಮೀಸಲಾತಿ ನೀಡಬೇಕೆಂದು ಹೋರಾಟಗಳ ಹಿನ್ನೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಎ.ಜೆ ಸದಾಶಿವ ವರದಿಯನ್ನ ರಾಜ್ಯ ಸರ್ಕಾರವು 2012 ರಲ್ಲಿ ಸಲ್ಲಿಸಿದ್ದಾರೆ. ಆದರೂ ಇದೂವರೆಗೂ ಆಡಳಿತ ನಡೆಸುತ್ತಿರುವ ಸರ್ಕಾರಗಳು ವರದಿ ಜಾರಿಗೊಳಿಸಿಲ್ಲ.

ವಿಧಾನ ಸಭೆಯಲ್ಲಿ ವರದಿ ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಮೀನಾಮೇಷ  ಮಾಡುತ್ತಿದ್ದು ಇದು ಸರಿಯಾದ  ಕ್ರಮವಲ್ಲ. ಇದಕ್ಕಾಗಿ ಕೂಡಲೇ ಗಮನಹರಿಸಲು ಮಾದಿಗ ದಂಡೋರ ಸಮಿತಿ ಮುಖಂಡರು ಮನವಿ ಮಾಡಿದ್ದಾರೆ.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು