ವಿಜಯ ಸಂಘರ್ಷ
ಬೆಂಗಳೂರು: ರಾಜ್ಯದಲ್ಲಿ ನಾಳೆ ಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭವಾಗಲಿದ್ದು, ಮುಂದಿನ ತಿಂಗಳ ಮೂರರವರೆಗೂ ( ಸೆ. 3 ರವರೆಗೆ) ಪರೀಕ್ಷೆ ನಡೆಯಲಿದೆ ಎಂದು ಪ್ರೌಢ ಶಿಕ್ಷಣ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿ ಗಳಿಗೆ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸುವುದಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪ್ರಕಟಿಸಿದೆ. ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಪ್ರವೇಶಪತ್ರ ತೋರಿಸಿ ಉಚಿತ ಪ್ರಯಾಣ ಮಾಡಬಹುದಾಗಿದೆ ಎಂದು ಸಂಸ್ಥೆ ಹೇಳಿದೆ.
ಬೆಂಗಳೂರಿನಲ್ಲಿ ಬೇರೆ, ಬೇರೆ ಬಡಾವಣೆ ಮತ್ತು ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ್ದು, ವಿದ್ಯಾರ್ಥಿಗಳು ವಾಸಸ್ಥಳ ದಿಂದ ಪರೀಕ್ಷಾ ಕೇಂದ್ರದವರೆಗೆ ಬಸ್ಸಿನಲ್ಲಿ ಪ್ರಯಾಣಿಸುವಾಗ ದ್ವಿತೀಯ ಪಿಯುಸಿ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹು ದಾಗಿದ್ದು ಇದರ ಸೌಲಭ್ಯ ಪಡೆಯುವಂ ತೆ ಸಂಸ್ಥೆ ಕೋರಿದೆ. ಪರೀಕ್ಷೆ ನಡೆಯುವ 200 ಮೀಟರ್ ಸುತ್ತಳತೆಯಲ್ಲಿ ಜಿಲ್ಲಾ ಡಳಿತಗಳು ನಿಷೇದಾಜ್ಞೆ ಜಾರಿಗೊಳಿಸಿವೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795