ವಿಜಯ ಸಂಘರ್ಷ
ಭದ್ರಾವತಿ: ತಾಲೂಕು ಕಛೇರಿ ಆಡಳಿತ ಕಡತ ವಿಲೇವಾರಿಯಲ್ಲಿ ವಿಳಂಬ ಮಾಡುತ್ತಿದ್ದು,ಇದರಿಂದಾಗಿ ಸಾರ್ವಜನಿ ಕರು ತೊಂದರೆ ಅನುಭವಿಸುವಂತಾಗಿ ದೆ. ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್ ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿ, ರೈತರ, ಸಾರ್ವಜನಿಕರ ಕಡತಗಳ ವಿಲೇವಾರಿ ಯಿಂದಾಗಿ ಗ್ರಾಮೀಣಾ ಭಾಗದ ರೈತರು ಹಾಗು ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಅಲ್ಲದೆ ವಿಕಲಚೇತನ, ವೃದ್ಧಾಪ್ಯ ಹಾಗು ವಿಧವಾ ವೇತನ ಸಹ ವಿಳಂಬ ವಾಗು ತ್ತಿದ್ದು, ವಿಕಲಚೇತನರು, ಮಹಿಳೆಯರು ಮತ್ತು ವೃದ್ಧರು ತಾಲೂಕು ಕಛೇರಿ ಅಲೆದಾಡುವಂತಾಗಿದೆ. ಕಛೇರಿಯಲ್ಲಿ ಅಧಿಕಾರಿಗಳನ್ನು ವಿಚಾರಿಸಿದರೆ ಪ್ರತಿ ಬಾರಿ ವಿದ್ಯುತ್ ಸಮಸ್ಯೆ ಇರುವುದಾಗಿ ಉತ್ತರ ನೀಡುತ್ತಾರೆ. ಅಲ್ಲದೆ ಕಛೇರಿ ಯಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಆರ್. ಪ್ರದೀಪ್, ಮನವಿ ಸ್ವೀಕರಿಸಿ ಕಡತ ವಿಲೇವಾರಿಯಲ್ಲಿ ಉಂಟಾಗಿರುವ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ತಾಲೂಕು ಅಧ್ಯಕ್ಷ ಹಿರಿಯಣ್ಣಯ್ಯ, ಮುಖಂಡರಾದ ಶರತ್ಚಂದ್ರ,ರುದ್ರೇಶ್, ಹನುಮಂತಪ್ಪ,ಮಹಂತೇಶ್ ಮತ್ತಿತರ ರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795