ವಿಜಯ ಸಂಘರ್ಷ
ದಾವಣಗೆರೆ: ದೇಶದ ಎಲ್ಲ ಮೀಸಲು ಲೋಕಸಭಾ ಕ್ಷೇತ್ರಗಳಲ್ಲಿ ಅಂಬೇಡ್ಕರ್ ನವೋದಯ ಶಾಲೆ ತೆರೆಯಲಾಗುವುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ಎ. ನಾರಾಯಣಸ್ವಾಮಿ ದಾವಣಗೆರೆಯಲ್ಲಿಂದು ಹೇಳಿದ್ದಾರೆ.
ಸಂಯುಕ್ತ ಪ್ರಾದೇಶಿಕ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ಅವರು ಸುದ್ದಿ ಗಾರರೊಂದಿಗೆ ಮಾತನಾಡಿ, ಕೇಂದ್ರ ಸಚಿವರು, ದೇಶದ ದಲಿತರು ಮತ್ತು ದಮನಿತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಎಲ್ಲ 84 ಮೀಸಲು ಲೋಕಸಭಾ ಕ್ಷೇತ್ರಗಳಲ್ಲಿ ಅಂಬೇಡ್ಕರ್ ನವೋದಯ ಶಾಲೆ ತೆರೆಯಲು ಸರ್ಕಾರ ನಿರ್ಧರಿಸಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಲು ಕೇಂದ್ರ ಸರ್ಕಾರ ಸದ್ಯದಲ್ಲಿಯೇ ಕ್ರಮ ಕೈಗೊಳ್ಳಲಿದೆ. ದೇಶಾದ್ಯಂತ ಜಾತಿ ಸಮೀಕ್ಷೆ ನಡೆಸಲು ಸರ್ಕಾರ ಪರಿಣಿತರ ಸಮಿತಿಯನ್ನು ರಚಿಸಿದ್ದು, ಸಮಿತಿಯ ವರದಿಯಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಐಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿಭಾವಂತ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ತರಬೇತಿ ಕಲ್ಪಿಸಲಾಗುವುದು ಹಾಗೂ ಮತರಿಶಿಷ್ಟ ಜಾತಿ ಮತ್ತು ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ ನಿಗಮಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಹಣಕಾಸು ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795