ಸರ್ಕಾರಿ ಸೌಲಭ್ಯ ಪಡೆಯಲು ಗುರುತಿನ ಚೀಟಿ ಕಡ್ಡಾಯ: ಬಿ.ಕೆ.ಮೋಹನ್

 

ವಿಜಯ ಸಂಘರ್ಷ



ಭದ್ರಾವತಿ: ಕಟ್ಟಡ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಕಡ್ಡಾಯವಾಗಿ ಗುರುತಿನ ಚೀಟಿ ಮಾಡಿಸಿ ಕೊಳ್ಳಬೇಕೆಂದು ನಗರಸಭಾ ಸದಸ್ಯ ಬಿ.ಕೆ ಮೋಹನ್ ಹೇಳಿದರು.

ಅವರು ತಾಲೂಕಿನ ಕೂಡ್ಲಿಗೆರೆ ಗ್ರಾಮದ ಸಮುದಾಯ ಭವನದಲ್ಲಿ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ಸೆಂಟ್ರಲ್ ಯೂನಿಯನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೂಡ್ಲಿಗೆರೆ ಹಾಗು ಹರಳಿಹಳ್ಳಿ ಗ್ರಾಮದ ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ದಿನಸಿ ಸಾಮಗ್ರಿ ವಿತರಿಸಿ ಮಾತನಾಡಿದರು.



ಕಟ್ಟಡ ಕಾರ್ಮಿಕರು ಗುರುತಿನ ಚೀಟಿ ಹೊಂದುವುದರಿಂದ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸೌಲಭ್ಯ ಗಳನ್ನು ತಕ್ಷಣ ಪಡೆದುಕೊಳ್ಳ ಬಹುದಾಗಿದೆ. ಅರ್ಹ ಕಾರ್ಮಿಕರು ಸೌಲಭ್ಯಗಳಿಂದ ವಂಚಿತವಾಗಬಾರದು ಎಂದರು.

ಯೂನಿಯನ್ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಸಂಜಯ್ಕುಮಾರ್, ತಾಲೂಕು ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್, ತಾಂತ್ರಿಕ ಸಲಹೆಗಾರ ಮನೋಹರ್, ಸಂಘಟನಾ ಕಾರ್ಯದರ್ಶಿ ಕುಮಾರ್, ಉಪಾಧ್ಯಕ್ಷ ನಾಗೇಂದ್ರರೆಡ್ಡಿ, ಕೂಡ್ಲಿಗೆರೆ ಭಾಗದ ಅಧ್ಯಕ್ಷ ರುದ್ರಮುನಿ,  ಗ್ರಾಮಾಂತರ ಅಧ್ಯಕ್ಷ ಹಬೀಬ್, ಶಿವಣ್ಣಗೌಡ ಹಾಗು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು