ಬಣಜಾರ್ ಹೆಣ್ಣುಮಗಳ ಅತ್ಯಾಚಾರ ಖಂಡಿಸಿ ಪ್ರತಿಭಟನೆ: ಮನವಿ

 

ವಿಜಯ ಸಂಘರ್ಷ



ಭದ್ರಾವತಿ: ನೆರೆ ಜಿಲ್ಲೆ ಆಂಧ್ರಪ್ರದೇಶ ದಲ್ಲಿ ಬಣಜಾರ್ ಸಮುದಾಯದ ಹೆಣ್ಣು ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವವ ರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವ ಜೊತೆಗೆ ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ತಾಲೂಕು ಬಂಜಾರ ಯುವಕರ ಸಂಘದ ಅಧ್ಯಕ್ಷ ಕೃಷ್ಣಾನಾಯ್ಕ ಆಗ್ರಹಿಸಿದರು.

ಮಿನಿ ವಿಧಾನ ಸೌಧ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ  ಮಾತನಾಡಿದ ಅವರು, ಆಂಧ್ರ ಪ್ರದೇಶದ ಚಂದ್ರ ಬಾಂಡ್ಯ ತಾಂಡದಲ್ಲಿ ಹೈದ್ರಾಬಾದ್, ಮುಂಬೈಗೆ ವಲಸೆ ಬಂದಂತಹ ಬಣಜಾರ್ ಸಮುದಾಯದ ಹೆಣ್ಣು ಮಗಳನ್ನು ಅಲ್ಲಿನ ಸ್ಥಳೀಯ ಯುವಕರು ಬಲವಂತಾಗಿ ಅರಣ್ಯಕ್ಕೆ ಎಳೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ನಂತರ ಪೆಟ್ರೋಲ್ ಸುರಿದು ಸುಟ್ಟು ಹಾಕುವ ಮೂಲಕ ಕ್ರೌರ್ಯ ಮೆರೆದಿದ್ದಾರೆ. ಈ ಅತ್ಯಾಚಾರದಲ್ಲಿ ಭಾಗಿಯಾಗಿರುವ ಕಾಮುಕರನ್ನು ತಕ್ಷಣ ಬಂಧಿಸಿ ಗಲ್ಲಿಗೇರಿಸಬೇಕೆಂದು ಆಗ್ರಹಿಸಿದರು.

ಪ್ರಕರಣವನ್ನು ಆಂಧ್ರ ಪ್ರದೇಶದ ಗೃಹ ಸಚಿವರು ಗಂಭಿರವಾಗಿ ಪರಿಗಣಿಸ ಬೇಕು. ಹೆಣ್ಣು ಮಕ್ಕಳಿಗೆ ಸೂಕ್ತ ಭದ್ರತೆ ಒದಗಿಸುವ ಜೊತೆಗೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಹೆಣ್ಣು ಮಗಳ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ, ತಹಸೀಲ್ದಾರ್ ಆರ್. ಪ್ರದೀಪ್ ಮೂಲಕ ಆಂಧ್ರ ಪ್ರದೇಶದ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.


ತಾಲೂಕು ಬಣಜಾರ ಸಂಘದ ಅಧ್ಯಕ್ಷ ಪ್ರೇಮ್‌ಕುಮಾರ್, ಮುಖಂಡರಾದ ಹನುಮಂತನಾಯ್ಕ, ಚಂದು, ಪ್ರವೀಣಕುಮಾರ್, ಓಂಕಾರನಾಯ್ಕ, ನಾಗಾನಾಯ್ಕ, ಮಂಜುನಾಯ್ಕ, ಶಂಕರನಾಯ್ಕ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು