ವಿಜಯ ಸಂಘರ್ಷ
ಬೆಂಗಳೂರು: ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಹೆಬ್ಬಾಳ ಬಳಿಯ ಗುಡ್ಡದಹಳ್ಳಿ ಬಳಿ ನಡೆದಿದೆ.
ಅವಿನಾಶ ಅಲಿಯಾಸ್ ರೆಬೆಲ್ ಗುಂಡೇಟು ತಿಂದ ರೌಡಿಶೀಟರ್. ಆರೋಪಿ ಅವಿನಾಶ್ ಸಂಜಯನಗರ ಠಾಣೆ ರೌಡಿಶೀಟರ್ ಆಗಿದ್ದು, ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ.
ಈ ಹಿಂದೆ ಮುನಿರಾಜು ಎಂಬುವವರ ಮೇಲೆ ಹಾಡಹಗಲೇ ಅವಿನಾಶ್ ಹಲ್ಲೆ ಮಾಡಿ ಪರಾರಿಯಾಗಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಸಂಜನಗರ ಇನ್ಸ್ಪೆಕ್ಟರ್ ಬಾಲರಾಜ್ ಹಾಗೂ ತಂಡ ತೆರಳಿತ್ತು. ಈ ವೇಳೆ ಪೇದೆ ಸಂತೋಷ್ ಮೇಲೆ ಅವಿನಾಶ್ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದನು. ಪರಿಣಾಮ ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿ ಕಾಲಿಗೆ ಇನ್ಸ್ಪೆಕ್ಟರ್ ಬಾಲರಾಜ್ ಗುಂಡು ಹಾರಿಸಿ ಬಂಧಿಸಿದ್ದಾರೆ.
ಸದ್ಯ ಗಾಯಗೊಂಡಿರುವ ಆರೋಪಿ ಹಾಗೂ ಪೊಲೀಸ್ ಪೇದೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795