ನಗರಸಭೆ ಚುನಾವಣೆ: ಮೂರು ಪಕ್ಷಗಳ ಒಕ್ಕಲಿಗರ ಸೆಣಸಾಟ

 

ವಿಜಯ ಸಂಘರ್ಷ



ಭದ್ರಾವತಿ: ನಗರಸಭೆ ವಾರ್ಡ್ ನಂ.29 ರ ಚುನಾವಣೆ ಪ್ರಚಾರದ ಭರಾಟೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ 3 ಪಕ್ಷಗಳು ತೀವ್ರ ಪೈಪೋಟಿಗೆ ಮುಂದಾಗಿವೆ.

ಸೆ.3 ರಂದು ಮತದಾನ ನಡೆಯಲಿದ್ದು, ಉಳಿದಿರುವ 2 ದಿನಗಳಲ್ಲಿ ವ್ಯಾಪಕ ಪ್ರಚಾರಕ್ಕೆ 3 ಪಕ್ಷಗಳು ಸಿದ್ದತೆಗಳನ್ನು ಕೈಗೊಂಡಿವೆ. ಈಗಾಗಲೇ ವಾರ್ಡ್ ವ್ಯಾಪ್ತಿಯಲ್ಲಿ ಮೂರ್ನಾಲ್ಕು ಸುತ್ತಿನ ಪ್ರಚಾರ ನಡೆಸಲಾಗಿದೆ.

ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಗೆಲ್ಲುವುದು ಪ್ರತಿಷ್ಠೆಯಾಗಿದ್ದರೇ, ಜೆಡಿಎಸ್ ಪಕ್ಷಕ್ಕೆ ಉಳಿಸಿಕೊಳ್ಳುವ ತವಕ, ಈ ನಡುವೆ ಬಿಜೆಪಿ ಅದೃಷ್ಟ ಪರೀಕ್ಷೆಗೆ ಎದುರು ನೋಡುತ್ತಿದೆ. 3 ಪಕ್ಷಗಳ ಅಭ್ಯರ್ಥಿಗಳು ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಕಾರಣ ಚುನಾವಣೆ ಮತ್ತಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

 ಇವೆಲ್ಲದರ ನಡುವೆ ಚುನಾವಣಾ ಅಕ್ರಮಗಳು ಸಹ ಹೆಚ್ಚಾಗುತ್ತಿದ್ದು, ಮತದಾರರನ್ನು ಸೆಳೆಯಲು ನಾನಾ ರೀತಿಯ ಅಕ್ರಮಗಳನ್ನು ನಡೆಸ ಲಾಗುತ್ತಿದೆ ಎಂಬ ದೂರುಗಳು ಸ್ಥಳೀಯರಿಂದ ಕೇಳಿ ಬರುತ್ತಿವೆ. ಅಕ್ರಮಗಳ ವಿಚಾರಕ್ಕೆ ಸಂಬಂಧಿಸಿ ದಂತೆ 3 ಪಕ್ಷಗಳು ಪರಸ್ಪರ ದೋಷಾ ರೋಪಣೆಗಳನ್ನು ಮಾಡುತ್ತಿವೆ. ಅಲ್ಲದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ರಾತ್ರಿ 3 ಪಕ್ಷಗಳ ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮಾಹಿತಿ ಅರಿತು ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು